ಹತ್ರಾಸ್ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆಗೆ ಯುಪಿ ಸರ್ಕಾರ ಆದೇಶ!
ದೇಶದ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಉ.ಪ್ರ. ಸಿಎಂ ಆದೇಶಿಸಿದ್ದಾರೆ.
ಉನ್ನತ ಅಧಿಕಾರಿಗಳ ಸಭೆ ನಡೆಸಿ, ನಿರ್ಧಾರ ಕೈಗೊಂಡಿರುವ ಸಿಎಂ ಯೋಗಿ ಆಧಿತ್ಯಾನಾಥ್, ಹಾಥ್ರಸ್ ಘಟನೆಯ ತೀವ್ರ ತನಿಖೆಗೆಗಾಗಿ ಸಿಬಿಐಗೆ ವಹಿಸುತ್ತಿದ್ದೇವೆ. ಈ ಘಟನೆಯ ತಪ್ಪಿತಸ್ತರನ್ನು ಬಿಡುವುದಿಲ್ಲ. ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ.
ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆಯಿಂದ ಹಿಡಿದು ಆಕೆಯ ಪೋಷಕರ ಅನುಪಸ್ಥಿತಿಯಲ್ಲಿ ಸಂಶಯಾಸ್ಪದವಾಗಿ ಶವಸಂಸ್ಕಾರ ಮಾಡುವವರೆಗೆ ಈ ಪ್ರಕರಣವನ್ನುಎಲ್ಲಾ ರೀತಿಯಲ್ಲೂ ತನಿಖೆಗೆ ಒಳಪಡಿಸಬೇಕು ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
हाथरस की दुर्भाग्यपूर्ण घटना और जुड़े सभी बिंदुओं की गहन पड़ताल के उद्देश्य से @UPGovt इस प्रकरण की विवेचना केंद्रीय अन्वेषण ब्यूरो (CBI) के माध्यम से कराने की संस्तुति कर रही है।
इस घटना के लिए जिम्मेदार सभी लोगों को कठोरतम सजा दिलाने के लिए हम संकल्पबद्ध हैं।
— Yogi Adityanath (@myogiadityanath) October 3, 2020
ಉತ್ತರ ಪ್ರದೇಶ ಸರ್ಕಾರದ ಮೇಲಿನ ಭರವಸೆ ಕಳೆದುಕೊಂಡಿರುವ ಸಂತ್ರಸ್ತೆಯ ಪೋಷಕರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಮಾರ್ಗದರ್ಶನದಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ ಪ್ರಕರಣ: ಜಗತ್ತಿನ ಮುಂದೆ ಸತ್ಯಬಿಚ್ಚಿಟ್ಟ ವರದಿಗಾರ್ತಿ ತನುಶ್ರೀ ಪಾಂಡೆ!
ಅತ್ಯಾಚಾರ ಮತ್ತು ಕ್ರೂರ ಹಲ್ಲೆಗೆ ಒಳಗಾಗಿದ್ದ ಹತ್ರಾಸ್ನ 19 ವರ್ಷದ ಯುವತಿ, ಸೆ.28 ರಂದು ಸಾವನ್ನಪ್ಪಿದ್ದರು. ಆಕೆಯ ಸಾವಿನ ನಂತರ, ಸ್ವತಃ ಸಿಎಂ ಯೋಗಿ ಆಧಿತ್ಯಾನಾಥ್ ಸಂತ್ರಸ್ತೆಯ ಪೊಷಕರೊಂದಿಗೆ ಮಾತನಾಡಿ ಪತ್ರಿಭಟನೆ ನಡೆಸವುದಿಲ್ಲ ಎಂದು ಪತ್ರ ಬರೆದುಕೊಡುವಂತೆ ಒತ್ತಾಯಸಿ ಪತ್ರ ಬರೆಸಿಕೊಂಡಿದ್ದರು. ಅಲ್ಲದೆ, ಜಿಲ್ಲಾಧಿಕಾರಿ ಪೊಷಕರನ್ನು ಭೇಟಿ ಮಾಡಿ ತಮ್ಮ ಹೇಳಿಕೆಗಳನ್ನು ಬದಲಿಸುವಂತೆ ಧಮಕಿ ಹಾಕಿದ್ದರು.
ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ ಸಂತ್ರಸ್ಥೆಯ ತಂದೆಗೆ ಹೇಳಿಕೆ ಬದಲಿಸುವಂತೆ ಧಮಕಿ ಹಾಕಿದ ಜಿಲ್ಲಾಧಿಕಾರಿ: ವಿಡಿಯೋ ವೈರಲ್
ಇದೆಲ್ಲವೂ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ನಿರಂತರ ಪತ್ರಿಭಟನೆಗಳು ನಡೆಯುತ್ತಲೇ ಇವೆ. ಅಲ್ಲದೆ, ನಿನ್ನೆ, ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ಗಾಂಧಿ ಸಂತ್ರಸ್ತೆ ಕುಟುಂಬವನ್ನು ಭೇಟಿ ಮಾಡಿದ್ದಾರೆ.
ಕಾಂಗ್ರೆಸ್, ಟಿಎಂಸಿ ಮೊದಲಾದ ಪಕ್ಷಗಳ ನಾಯಕರು, ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಹಾಥ್ರಸ್ ಘಟನೆಯನ್ನು ಖಂಡಿಸಿ ಯೋಗಿ ಆದಿತ್ಯನಾಥ್ ಅವರ ರಾಜೀನಾಮೆಗೆ ಆಗ್ರಹಿಸಿದ್ದರು.
ದೇಶದ ಜನರ ಆಕ್ರೋಶ, ವಿರೋಧ ಪಕ್ಷಗಳ ವಿರೋಧಕ್ಕೆ ಮಣಿದಿರುವ ಸರ್ಕಾರ, ಎಸ್ಪಿ, ಡಿಎಸ್ಪಿ ಸೇರಿದಂತೆ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಇಂದು ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದೆ.
ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ ಪ್ರಕರಣದಲ್ಲಿ ಜಿಲ್ಲಾಧಿಕಾರಿಯೇ ಖಳನಾಯಕ: ಆತ ಮಾಡಿದ್ದೇನು ಗೊತ್ತೇ?

