ಕೆ. ಸುಧಾಕರ್ ಬಿ.ಶ್ರೀರಾಮುಲು ನಡುವಿನ ವಿವಾದಕ್ಕೆ ತಾತ್ಕಾಲಿಕ ತೆರೆ ಎಳೆದ ಬಿಎಸ್ವೈ..!

ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನಡುವಿನ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾಲೋಚನೆ ಮಾಡಿ ಸಚಿವರ ಜೊತೆ ಬಿಕ್ಕಟ್ಟು ನಿವಾರಿಸುವ ಪ್ರಯತ್ನ ಮಾಡಿದರು. ಉಪ ಚುನಾವಣೆ ಸಂದರ್ಭದಲ್ಲಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಉಂಟು ಮಾಡುವುದು ಸರಿಯಲ್ಲ. ಒಟ್ಟಿಗೆ ಕೆಲಸ ಮಾಡಿ ಎಂದು ಸಲಹೆ ನೀಡಿದರು ಎನ್ನಲಾಗಿದೆ. ಈ ಇಬ್ಬರೂ ಸಚಿವರು ಪರಸ್ಪರ ಸೌಹಾರ್ದಯುತವಾಗಿ ಮುಖ್ಯಮಂತ್ರಿ ಅವರ ಜತೆ ಸಮಾಲೋಚನೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಬಿ. ಶ್ರೀರಾಮುಲು, ರಾಜ್ಯದ ಜನರಿಗೆ ಒಳ್ಳೆಯದು ಮಾಡಬೇಕೆಂದು ಯಡಿಯೂರಪ್ಪನವರು ಹೇಳಿದ್ದಾರೆ. ಅಧಿಕಾರಕ್ಕೆ ಬಂದಾಗ ನಾನೇ ಸಮಾಜ ಕಲ್ಯಾಣ ಇಲಾಖೆ ಖಾತೆ ಕೇಳಿದ್ದೆ. ಆದರೆ, 2008-9ಲ್ಲಿ ಉತ್ತಮ ಕೆಲಸ ಮಾಡಿದ್ದೀರಿ ಎಂದು ಯಡಿಯೂರಪ್ಪನವರೇ ನನಗೆ ಆರೋಗ್ಯ ಖಾತೆ ನೀಡಿದ್ದರು. ನಾನೀಗ ಬಹಳ ಸಂತೋಷದಿಂದ ಸಮಾಜ ಕಲ್ಯಾಣ ಇಲಾಖೆ ಖಾತೆಯನ್ನು ಒಪ್ಪಿದ್ದೇನೆ ಎಂದು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಸುಧಾಕರ್ ಅವರು, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ದೊರೆತಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights