ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಮತ್ತೆ ಪ್ರವಾಹ ಭೀತಿ – ರೆಡ್‌ ಅಲರ್ಟ್‌!

ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲದೆ, ವಿಜಯಪುರ, ಕಲುಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಭೀತಿ ಎದುರಾಗಿದೆ.

Krishna Raja Sagar Dam in Mysore | Entry Fees, and Timings

ವಿಜಯಪುರ, ಬಾಗಿಲುಕೋಟೆ, ಕಲುಬುರ್ಗಿ, ಬೀದರ್, ಯಾದಗಿರಿ, ರಾಯಚೂರಿನ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಜನತೆ ಎಚ್ಚರದಿಂದ ಇರಬೇಕೆಂದು ಸೂಚಿಸಲಾಗಿದೆ.

ಮಳೆಯಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿನ ಕಬ್ಬು, ಸೋಯಾಬೀನ್, ಹತ್ತಿ, ಮೆಕ್ಕೆಜೋಳ ನೆಲ ಕಚ್ಚಿದ್ದು, ಕೆಲವು ಜಿಲ್ಲೆಗಳಲ್ಲಿ ಅಡಕೆ ಬೆಳೆಗೂ ಹಾನಿಯಾಗಿದೆ. ನೂರಾರು ಜನ ಮನೆ ಮಠ ಕಳೆದುಕೊಂಡು, ಅಕ್ಷರಶಃ ಬೀದಿಗೆ ಬಂದಿದ್ದಾರೆ.

ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ-ತೆಲಂಗಾಣದಲ್ಲಿ ಭಾರಿ ಮಳೆಗೆ 2 ಸಾವು!

ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸದವತ್ತಿ, ಬೈಲಹೊಂಗಲ, ಚಿಕ್ಕೋಡಿ, ಅಥಣಿಯಲ್ಲಿ ಭಾರೀ ಮಳೆಯಾಗಿದ್ದು, ಸಾವಿರಾರುಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಸೋಯಾಬೀನ್, ಹತ್ತಿ, ಮೆಕ್ಕೆಜೋಳ ಮಳೆಯಿಂದ ಹಾನಿಯಾಗಿದ್ದು, ರೈತರು ತಲೆಯ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಹ ಧಾರುಣ ಪರಿಸ್ಥಿತಿ ಎದುರಾಗಿದೆ.

ವಿಜಯಪುರ ಜಿಲ್ಲೆಯಲ್ಲೂ ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಎಲ್ಲ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಧೋಣಿ ನದಿ ಪ್ರವಾಹ ಮುಂದುವರಿದಿದ್ದು, ಇದರ ಪರಿಣಾಮವಾಗಿ ಬಸವನ ಬಾಗೇವಾಡಿ, ದೇವರ ಹಿಪ್ಪರಗಿ ತಾಲೂಕುಗಳ ನಡುವೆ ಸಂಪೂರ್ಣಕಡಿದು ಹೋಗಿದೆ. ತಾಳಿಕೋಟೆ ಸೇತುವೆ ಸಂಪೂರ್ಣಜಲಾವೃತಗೊಂಡಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ, ಹಡಗಿನಾಳ, ಶಿವಪುರ, ಕಲ್ಲದೇವನಹಳ್ಳಿ, ಮೂಕಿನಾಳ ಗ್ರಾಮಗಳ ಸಂಪರ್ಕಕ ಡಿದುಹೋಗಿದೆ.

ಕೃಷ್ಣಾ ನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ; ಆತಂಕದಲ್ಲಿ ಉತ್ತರ ಕರ್ನಾಟಕದ ಜನರು! –  dailyindia

ರಾಯಚೂರು ಜಿಲ್ಲೆಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು, ಸಾವಿರಾರು ಎಕರೆ ಪ್ರದೇಶದಲ್ಲಿನ ಭತ್ತ ನೆಲ ಕಚ್ಚಿದೆ. ಕೋಟ್ಯಂತರರೂಪಾಯಿ ನಷ್ಟ ಸಂಭವಿಸಿದೆ. ಇನ್ನೂ ಕರಾವಳಿ ಜಿಲ್ಲೆಗಳಲ್ಲೂ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಜನಜೀವನ ಬಾಧಿತಗೊಂಡಿದೆ.

ಕಲಬುರಗಿ ಜಿಲ್ಲೆಯ ಕಾಗೀಣಾ, ಮುಲ್ಲಾಮಾರಿ, ಭೀಮಾ ನದಿಗಳು ತುಂಬಿ ಹರಿಯುತ್ತಿವೆ. ಅಲ್ಲದೆ, ನಗರ ಮತ್ತು ಪಟ್ಟಣದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ದವಸ ಧಾನ್ಯ ಸೇರಿದಂತೆ ಹಲವು ವಸ್ತುಗಳು ಹಾನಿಗೊಳಗಾಗಿವೆ. ಸೇತುವೆ, ರಸ್ತೆಗಳು ಜಲಾವೃತಗೊಂಡು ಸೇತುವೆಗಳು ಮಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.

ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಅನೇಕ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಅಲ್ಲದೆ, ರಾತ್ರಿ ಇಡೀ ಮಳೆ ಸುರಿಯುತ್ತಿರುವುದರಿಂದ ಜನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.


ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಭಾರೀ ಮಳೆ : ಕಾಂಪೌಂಡ್ ಕುಸಿದು 2 ತಿಂಗಳ ಮಗು ಸೇರಿ 9 ಮಂದಿ ಸಾವು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights