ಖ್ಯಾತ ಮಲಯಾಳಂ ಕವಿ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಅಕ್ಕಿತಮ್ ವಿಧಿವಶ..!

ಖ್ಯಾತ ಮಲಯಾಳಂ ಕವಿ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಅಕ್ಕಿತಂ (94) ಅವರು ಕೇರಳದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ 8.10 ಕ್ಕೆ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ಮಾದ್ಯಮಕ್ಕೆ ತಿಳಿಸಿವೆ.

1926 ರಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಜನಿಸಿದ ಅಕ್ಕಿತಂ ಅಚುತನ್ ನಂಬೂತಿರಿ, ಅಕ್ಕಿತಾಮ್ ಎಂದೇ ಪ್ರಸಿದ್ಧರಾಗಿದ್ದರು. ಅವರು ಎಂಟು ವರ್ಷದವರಿದ್ದಾಗ ಮೊದಲ ಕವನವನ್ನು ಬರೆದಿದ್ದಾರೆ. ಅವರು ಮಲಯಾಳಂ ಕಾವ್ಯದಲ್ಲಿ ಅತ್ಯಂತ ಗೌರವಾನ್ವಿತ ಹೆಸರುಗಳಲ್ಲಿ ಒಬ್ಬರಾಗಿದ್ದರು.

1973 ರಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವಾರು ಸಾಹಿತ್ಯಕ ಪುರಸ್ಕಾರಗಳನ್ನು ಪಡೆದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಕಿತಾಮ್ ಅವರ ವಿಮರ್ಶಾತ್ಮಕ ಪ್ರಬಂಧಗಳು, ಸಣ್ಣ ಕಥೆಗಳು ಮತ್ತು ಇತರ ಸಾಹಿತ್ಯ ಕೃತಿಗಳಿಗೆ ಹೆಸರುವಾಸಿಯಾಗಿದ್ದಾರೆ. ಅವುಗಳನ್ನು ಅನೇಕ ಭಾಷೆಗಳಿಗೆ ಅನುವಾದಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights