ಭಾರತದಲ್ಲಿ ಹೊಸದಾಗಿ 63,371 ಕೊರೊನಾ ಕೇಸ್ : 895 ಜನ ಸೋಂಕಿಗೆ ಬಲಿ..!

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಜನರಲ್ಲಿ ಆತಂಕವನ್ನು ಕಡಿಮೆ ಮಾಡಿಲ್ಲ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 63,371 ಹೊಸ ಪ್ರಕರಣಗಳು ದಾಖಲಾಗಿದ್ದು, 895 ಜನ ಮಹಾಮಾರಿ ಕೊರೊನಾಕ್ಕೆ ಬಲಿಯಾಗಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಶುಕ್ರವಾರದ ನವೀಕರಣದ ಪ್ರಕಾರ, ಒಟ್ಟು 73,70,469 ಪ್ರಕರಣಗಳ ಪೈಕಿ 8,04,528 ಸಕ್ರಿಯ ಪ್ರಕರಣಗಳು, 64,53,780 ಗುಣಮುಖರಾಗಿದ್ದಾರೆ. 1,12,161 ಜನ ಸೋಂಕಿಗೆ ಬಲಿಯಾಗಿದ್ದಾರೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,28,622 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 9,22,54,927 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights