ಯುಪಿಯ ಬರಾಬಂಕಿಯಲ್ಲಿ 18 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ, ಕತ್ತು ಹಿಸುಕಿ ಕೊಲೆ..!
ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಶವವಾಗಿ ಪತ್ತೆಯಾದ 18 ವರ್ಷದ ದಲಿತ ಯುವತಿ ಕತ್ತು ಹಿಸುಕುವ ಮುನ್ನ ಅತ್ಯಾಚಾರ ಎಸಗಲಾಗಿದೆ ಎಂದು ಮರಣೋತ್ತರ ವರದಿಯನ್ನು ಉಲ್ಲೇಖಿಸಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಕತ್ತು ಹಿಸುಕುವ ಮುನ್ನ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್ ಎಸ್ ಗೌತಮ್ ತಿಳಿಸಿದ್ದಾರೆ.
ಅತ್ಯಾಚಾರಕ್ಕೆ ಸಂಬಂಧಿಸಿದ ಆರೋಪಗಳನ್ನು ಸತ್ರಿಖ್ ಪೊಲೀಸ್ ಠಾಣೆಯಲ್ಲಿ ನೋಂದಾಯಿಸಿರುವ ಎಫ್‌ಐಆರ್‌ನಲ್ಲಿ ಸೇರಿಸಿ ಕೆಲವು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಯುವತಿ ಹೊಲಕ್ಕೆ ಹೋಗಿ ಮನೆಗೆ ಮರಳದೇ ಇದ್ದಾಗ ಯುವತಿಯ ತಂದೆ ಬುಧವಾರ ಸಂಜೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಯುವತಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಪೊಲೀಸ್ ತಂಡ ಗ್ರಾಮಕ್ಕೆ ಭೇಟಿ ನೀಡಿ ಎಫ್‌ಐಆರ್ ದಾಖಲಿಸುವ ಮೊದಲು ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

