ಕಮಲ್‌ನಾಥ್‌ಗೆ ಚುನಾವಣಾ ಆಯೋಗದಿಂದ ನೋಟಿಸ್: 48 ಗಂಟೆಗಳಲ್ಲಿ ನಿಲುವು ತಿಳಿಸಲು ಸೂಚನೆ
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಕಮಲ್‌ನಾಥ್ ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದ್ದು, 48 ಗಂಟೆಗಳಲ್ಲಿ ತಮ್ಮ ನಿಲುವು ಎನು ಎಂಬುದನ್ನು ತಿಳಿಸುವಂತೆ ಸೂಚಿಸಿದೆ.
ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವೆ ಇಮಾರ್ತಿ ದೇವಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಕಮಲ್ ನಾಥ್ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಕಮಲ್ ನಾಥ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಆಯೋಗ, ಮಧ್ಯಪ್ರದೇಶದ ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ಅನುಸಾರ, ಭಿನ್ನಾಭಿಪ್ರಾಯಗಳನ್ನು ಉಲ್ಬಣಗೊಳಿಸುವ ಅಥವಾ ಪರಸ್ಪರ ದ್ವೇಷ ವನ್ನು ಉಂಟುಮಾಡುವ ಅಥವಾ ವಿವಿಧ ಜಾತಿ ಮತ್ತು ಸಮುದಾಯಗಳ ನಡುವೆ ಉದ್ವಿಗ್ನತೆಯನ್ನು ಉಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ತೊಡಗಬಾರದು ಎಂದು ಆಯೋಗವು ನೋಟಿಸ್ ನಲ್ಲಿ ತಿಳಿಸಿದೆ.
ಅಲ್ಲದೆ, ರಾಷ್ಟ್ರೀಯ ಮಹಿಳಾ ಆಯೋಗವು ಕಮಲ್ ನಾಥ್ ಅವರಿಂದ ವಿವರಣೆಯನ್ನು ಕೋರಿದೆ.
ಬಿಜೆಪಿ ಸಚಿವೆ ಇಮಾರ್ತಿ ದೇವಿಯವರು ಗ್ವಾಲಿಯರ್‌ನ ದಬ್ರಾ ಕ್ಷೇತ್ರದಿಂದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಇದನ್ನೂ ಓದಿ: ಸಚಿವೆಯನ್ನು ಐಟಂ ಎಂದು ಕರೆದ ಮಾಜಿ ಸಿಎಂ: ಬಿಜೆಪಿಗರಿಂದ ತರಾಟೆ!

