ಬಿಹಾರ ಚುನಾವಣೆ: ಜೆಡಿಆರ್ ಪಕ್ಷದ ಅಭ್ಯರ್ಥಿಗೆ ಗುಂಡು ಹಾರಿಸಿ ಹತ್ಯೆ!
ಬಿಹಾರ ಚುನಾವಣೆಗೆ ಇನ್ನು ಮೂರು ದಿನಗಳಷ್ಟೇ ಬಾಕಿ ಇವೆ. ಈ ಮಧ್ಯೆ, ಇಂದು ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ನಾರಾಯಣ್ ಸಿಂಗ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.
ಬಿಹಾರದ ಶಿಯೋಹಾರ್ ಜಿಲ್ಲೆಯ ಹಥ್ಸಾರ್ ಗ್ರಾಮದಲ್ಲಿ ಜೆಡಿಆರ್ ಅಭ್ಯರ್ಥಿ ನಾರಾಯಣ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ನಾರಾಯಣ್ ಸಿಂಗ್ ಅವರ ಬೆಂಬಲಿಗರು ಎಂದು ಹೇಳಲಾಗಿರುವ ಜನರು ಹಲ್ಲೆ ನಡೆಸಿದ್ದಾರೆ ಎಂದು ಪೋಲೀಸರು ಹೇಳಿದ್ದಾರೆ. ವಿಧಾನಸಭೆ ಚುನಾವಣೆಗಾಗಿ ಮತಯಾಚನೆ ನಡೆಸುತ್ತಿದ್ದ ವೇಳೆ ನಾರಾಯಣ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ..
“ಇಬ್ಬರು ಜನರನ್ನು ಬಂಧಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ … ಸುಮಾರು ಐದು ರಿಂದ ಆರು ಜನರು ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದಾರೆ” ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ರಾಕೇಶ್ ಕುಮಾರ್ ಎಎನ್‌ಐಗೆ ತಿಳಿಸಿದ್ದಾರೆ.
ಘಟನೆ ಸಂಬಂಧ ಪೂರ್ಣಾಹಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಬಿಹಾರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆಯಲಿದ್ದು, ಮತ ಎಣಿಕೆ ನವೆಂಬರ್ 10 ರಂದು ನಡೆಯಲಿದೆ.
ಇದನ್ನೂ ಓದಿ: ಚುನಾವಣೆಯನ್ನು ಬಹಿಷ್ಕರಿಸಿದ ಬಿಹಾರದ 108 ಹಳ್ಳಿಗಳ ನಿವಾಸಿಗಳು!

