ಮಕ್ಕಳ ಮೇಲೆ ಲೈಂಗಿಕ ಕಿರುಕುಳ: ವಿರೋಧಿಸಿದ ತಾಯಿಯ ಹತ್ಯೆ!

ಮಹಿಳೆಯೊಬ್ಬಳು ತನ್ನ ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕಾಗಿ ನಾಲ್ಕು ಜನರಿಂದ ಮಾರಣಾಂತಿಕವಾಗಿ ಥಳಿಸಲ್ಪಟ್ಟು, ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಮನ್ಸೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟುಂಬ ಸದಸ್ಯರು ಸಲ್ಲಿಸಿದ ದೂರಿನಲ್ಲಿ, “ನೆರೆಹೊರೆಯ ನಾಲ್ಕು ಜನರು ತಮ್ಮ ಕುಟುಂಬದ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆರೋಪಿಸಲಾಗಿದೆ.

ಸೋಮವಾರ ಸಂಜೆ ನಾಲ್ವರು ಆರೋಪಿಗಳು ಆಕೆಯ ಮನೆಯೊಳಗೆ ಪ್ರವೇಶಿಸಿ ಸೆವ್ಟಿ ದೇವಿ (55) ಎಂಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಆಕೆಯನ್ನು ತೀವ್ರವಾಗಿ ಥಳಿಸಿದ್ದಾರೆ. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆಕೆ ಸತ್ತಿದ್ದಾಳೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪರಾರಿಯಾಗಿರುವ ಆಕಾಶ್, ಗೋಪಿ, ಬಿನೇಂದ್ರ, ಮತ್ತು ರಾಜೇಶ್ ಎಂಬ ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರನ್ನು ಹಿಡಿಯಲು ಮ್ಯಾನ್‌ಹಂಟ್ ನಡೆಯುತ್ತಿದೆ ಎಂದು ಮನ್ಸೂರ್‌ಪುರ ಪೊಲೀಸ್ ಠಾಣಾಧಿಕಾರಿ ಕೆ ಪಿ ಸಿಂಗ್ ಹೇಳಿದ್ದಾರೆ.


ಇದನ್ನೂ ಓದಿ: ಶಿರಾ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ? ವಿಡಿಯೋ ವೈರಲ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights