ಫ್ರೆಂಚ್ ಅಧ್ಯಕ್ಷನ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಸೇರಿ 2000 ಜನರ ವಿರುದ್ಧ FIR
ಯುರೋಪಿಯನ್ ದೇಶದಲ್ಲಿ ಪ್ರವಾದಿ ಮೊಹಮದ್ ಬಗ್ಗೆ ಕಾರ್ಟೂನ್ ಬಿಡಿಸಿದ್ದನ್ನು ವಿರೋಧಿಸಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ವಿರುದ್ಧ ಮಧ್ಯಪ್ರದೇಶದಲ್ಲಿ ಮುಸ್ಲಿಮರು ಪ್ರತಿಭಟನೆ ನಡಿಸಿದ್ದಾರೆ. ಪ್ರತಿಭಟನೆಯ ನಂತರ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕ ಆರಿಫ್ ಮಸೂದ್ ಮತ್ತು ಕೆಲವು ಪಾದ್ರಿಗಳು ಸೇರಿದಂತೆ 2,000 ಜನರ ವಿರುದ್ಧ FIR ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊರೊನಾ ನಿರ್ಬಂಧಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಜನರು ಸಭೆ ಸೇರುವುದನ್ನು ನಿಷೇಧಿಸಿದ್ದರೂ, ಪ್ರತಿಭಟನಾಕಾರರು ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಗುರುವಾರ ಸಂಜೆ ಐಪಿಸಿಯ ಸೆಕ್ಷನ್ 188 (ಸಾರ್ವಜನಿಕ ಸೇವಕನಾಗಿ ಆದೇಶಗಳನ್ನು ಉಲ್ಲಂಘಿಸಿವುದು) ಅಡಿಯಲ್ಲಿ ಮಸೂದ್ ಮತ್ತು ಕೆಲವು ಧರ್ಮಗುರುಗಳು ಸೇರಿದಂತೆ 2,000 ಜನರ ಮೇಲೆ ದೂರು ದಾಖಲಿಸಲಾಗಿದೆ ಎಂದು ತಲೈಯಾ ಪೊಲೀಸ್ ಠಾಣಾ ಅಧಿಕಾರಿ ಡಿ.ಪಿ.ಸಿಂಗ್ ತಿಳಿಸಿದ್ದಾರೆ.
ಫ್ರಾನ್ಸ್ನಲ್ಲಿ ಪ್ರವಾದಿ ಮುಹಮ್ಮದ್ ಅವರನ್ನು ವ್ಯಂಗ್ಯವಾಗಿ ಚಿತ್ರಿಸಿದ್ದಕ್ಕೆ ಸಂಬಂಧಿಸಿದ ವಿವಾದದ ಬಗ್ಗೆ ಕಾಂಗ್ರೆಸ್ ಶಾಸಕರು, ಮುಸ್ಲಿಂ ಧಾರ್ಮಿಕ ಮುಖಂಡರು ಮತ್ತು ಸಮುದಾಯದ ಸದಸ್ಯರೊಂದಿಗೆ ಗುರುವಾರ ಮ್ಯಾಕ್ರಾನ್ ವಿರುದ್ಧ ಇಕ್ಬಾಲ್ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಮುಂಗರ್ ಫೈರಿಂಗ್ ಹಿಂದೂತ್ವದ ಮೇಲಿನ ದಾಳಿ; BJP ಯಾಕೆ ಮೌನವಾಗಿದೆ: ಸಂಜಯ್ ರೌತ್

