ಕನ್ನಡ ರಾಜ್ಯೋತ್ಸವ: ಪ್ರತ್ಯೇಕ ಕಲ್ಯಾಣ ಕರ್ನಾಟಕಕ್ಕಾಗಿ ಪ್ರತಿಭಟನೆ; ಬಂಧನ
ಕನ್ನಡಿಗರು ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಇರುವಾಗಲೇ ಪ್ರತ್ಯೇಕ ಕಲ್ಯಾಣ ಕರ್ನಾಟಕಕ್ಕಾಗಿ ತ್ಯೇಕ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಪ್ರತಿಬಟನೆ ನಡೆಸಿದ್ದಾರೆ.
ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ಬೀದರ್, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳು ಅಭಿವೃದ್ಧಿಯಿಂದ ವಂಚಿತವಾಗಿವೆ. ಸರ್ಕಾರ ದಕ್ಷಿಣಕ್ಕಷ್ಟೇ ಸೀಮಿತವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ.
ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡರು.
ಅಭಿವೃದ್ಧಿ ವಂಚಿತ ಹೈದರಾಬಾದ್ ಕರ್ನಾಟಕ ಭಾಗಗಳನ್ನೂ ಒಳಗೊಂಡಂತೆ ಇನ್ನಿತರ ಹಿಂದುಳಿದ ಪ್ರದೇಶಗಳನ್ನು ಗುರ್ತಿಸಿ ಸರ್ಕಾರ ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಿದೆ. ಆದ್ರೆ, ಈ ಭಾಗದಲ್ಲಿ ಅಭಿವೃದ್ಧಿ ಅನ್ನೋದು ನಿಂತ ನೀರಾಗಿದೆ ಎಂಬುದು ಪ್ರತಿಭಟನಾಕಾರರ ಆರೋಪ.
Karnataka: Pratyeka Kalyana Karnataka Horata Samithi members detained by police, while they were protesting in Kalaburagi demanding a separate state of Kalyana Karnataka.
They allege that districts of Kalaburagi, Yadgir, Bidar, Koppal, Bellari & Raichur are under-developed. pic.twitter.com/3x2Qp6zIkC
— ANI (@ANI) November 1, 2020
ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ದೂರು ದಾಖಲು

