ಭಾರತದಲ್ಲಿ 46,254 ಹೊಸ ಕೊರೊನಾ ಕೇಸ್ ದಾಖಲು : 514 ಸೋಂಕಿತರು ಬಲಿ…!
ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನ ಕಳೆದಂತೆ ಕಡಿಮೆಯಾಗುತ್ತಿವೆ ಎನ್ನುವ ವರದಿಗಳ ಮಧ್ಯೆ ಕೊರೊನಾಗೆ ಇನ್ನೂ ಲಸಿಕೆ ಕಂಡುಹಿಡಿಯಲಾಗಿಲ್ಲ ಎನ್ನುವುದು ಗಮನಾರ್ಹ. ಹೀಗಾಗಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರುವುದು ತರವಲ್ಲ ಎನ್ನುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮನವಿಯಾಗಿದೆ.
ದೇಶದಲ್ಲಿ ಹೊಸದಾಗಿ 46,254 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈವರೆಗೆ ಒಟ್ಟು 83,13,877 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 514 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದು, ಈವರೆಗೆ ಸಾವಿನ ಸಂಖ್ಯೆ 1,23,611 ಕ್ಕೆ ಏರಿದೆ.
ಪ್ರಸ್ತುತ ದೇಶದಲ್ಲಿ 5,33,787 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 83,13,877 ಮಂದಿ ಒಟ್ಟು ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 53,357 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈ ವರೆಗೂ 76,56,478 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,09,609 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 11,29,98,959 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

