‘ವಿನಯ್ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ ದುರುದ್ದೇಶವಾಗಿದೆ’- ಡಿಕೆಶಿ, ಸಿದ್ದರಾಮಯ್ಯ
ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವ ಸಲುವಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇಂದು ಬೆಳಿಗ್ಗೆ ಸುಮಾರು 6.30ರಿಂದ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಸುದ್ದಿ ಮುಟ್ಟುತ್ತಿದ್ದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
ಇತ್ತ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ,’ವಿನಯ್ ಕುಲಕರ್ಣಿ ಜೊತೆ ನಾನೂ ಮಾತನಾಡಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಆತ ಹೇಳಿದ್ದಾನೆ. ವಿಚಾರಣೆ ಹಂತದಲ್ಲಿ ನಾನೇನು ಪ್ರತಿಕ್ರಿಯಿಸುವುದಿಲ್ಲ’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ ಪೊಲೀಸರು ವರದಿ ನೀಡಿದ್ದಾರೆ’ ಎಂದಿದ್ದಾರೆ.
ಇನ್ನೂ ‘ಸಾಕ್ಷ್ಯಾಧಾರಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯ್ ಕುಲಕರ್ಣಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಇದಕ್ಕೆ ಕಾಂಗ್ರೆಸ್ ರಾಜಕೀಯ ಬಣ್ಣ ಹಚ್ಚುತ್ತಿದೆ’ ಎಂದು ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ನಡುವೆ ವಿನಯ್ ಕುಲಕರ್ಣಿಯನ್ನು ವೈದ್ಯಕೀಯ ತಪಾಸಣೆಗೆಗೆ ಒಳಪಡಿಸಲಾಗಿದ್ದು, ಬಂಧನದ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


Sou um visitante que incessantemente retornança em seu blog.
Todo vez que venho cá me surpreendo mas e dá mas vontade de
revir. Se puder olha meu sítio da Internet de acompanhantes,
está bastante bom.