ಶಿರಾ ಉಪ ಚುನಾವಣೆ ಮತ ಎಣಿಕೆ : ಕಾಂಗ್ರೆಸ್ – ಬಿಜೆಪಿ ನಡುವೆ ತೀವ್ರ ಪೈಪೋಟಿ!

ಆರ್​ ಆರ್​ ನಗರ ಮತ್ತು ತುಮಕೂರು ಜಿಲ್ಲೆಯ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ. ಆರ್​ ಆರ್​ ನಗರ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕುಸುಮಾ ಹೆಚ್‌ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ವಿ. ಕೃಷ್ಣಮೂರ್ತಿ ಸ್ಪರ್ಧಿಸಿದ್ದಾರೆ. ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್​ ಗೌಡ, ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಅಮ್ಮಾಜಮ್ಮ ಕಣದಲ್ಲಿದ್ದಾರೆ. ಆದರೂ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಈ ಮಧ್ಯೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ತುಮಕೂರು ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಎಲ್ಲರ ಚಿತ್ತ ಗೆಲುವಿನತ್ತ ನೆಟ್ಟಿದೆ. ಒಟ್ಟು 24 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲ್ಲಿದ್ದು 4ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ನೇರ ಹಹಣಾಹಣಿ ಏರ್ಪಟ್ಟಿದೆ. ಮಾಹಿತಿ ಅನ್ವಯ ಶಿರಾದಲ್ಲಿ ಕ್ಷೇತ್ರದ ಬಿಜೆಪಿ ಅಭಯರ್ಥಿ ಡಾ. ರಾಜೇಶ್ ಗೌಡ 8,642 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ನ ಟಿಬಿ ಜಯಚಂದ್ರ 7339 ಮತ ಪಡೆದಿದ್ದಾರೆ. ಜೆಡಿಎಸ್ ನ ಅಮ್ಮಾಜಮ್ಮ ಪಡೆದ ಮತಗಳು 4,657.

ಕಳೆದ ಬಾರಿ ಜೆಡಿಎಸ್ನ ಬಿ ಸತ್ಯನಾರಾಯಣ ಗೆಲುವು ಸಾಧಿಸಿದ ಕ್ಷೇತ್ರ ಶಿರಾ . ಅವರ ಅಕಾಲಿಕ ನಿಧನದಿಂದಾಗಿ ಉಪಚುನಾವಣೆ ಎದುರಾಗಿತ್ತು. ಜೆಡಿಎಸ್ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮಗೆ ಟಿಕೆಟ್ ನೀಡಿದರೂ ಸಹ ಅನುಕಂಪ ಮತಗಳು ಬಂದಿಲ್ಲ ಎಂಬ ಚಿತ್ರಣ ಕಾಣುತ್ತಿದೆ. ಇನ್ನೂ ಕಾಂಗ್ರೆಸ್ ಟಿ ಬಿ ಜಯಚಂದ್ರ ಶಿರಾ ಕ್ಷೇತ್ರದಿಂದ 2008, 2013ರಲ್ಲಿ ಗೆಲವು ಸಾಧಿಸಿದ್ದಾರೆ. 2018 ರಲ್ಲಿ ಜೆಡಿಎಸ್ ನ ಬಿ. ಸತ್ಯನಾರಾಯಣ ವಿರುದ್ಧ ಸೋತಿದ್ದರು. ಈಗ ಉಪ ಚುನಾವಣೆಯಲ್ಲಿ ಬಿಜೆಪಿ ಪೈಪೋಟಿ ನೀಡುತ್ತಿದ್ದಾರೆ. ಶಿರಾದಲ್ಲಿ ಬಿಜೆಪಿ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ತಯಾರಿಯನ್ನು ಆರಂಭಿಸಿತ್ತು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದರು. ಇದುವರೆಗೂ ಬಿಜೆಪಿ ಶಿರಾ ಕ್ಷೇತ್ರದಲ್ಲಿ ಗೆದ್ದಿಲ್ಲ. ೊಂದು ವೇಳೆ ಡಾ. ರಾಜೇಶ್ ಗೌಡ ಗೆದ್ದರೆ ಬಿಜೆಪಿಯದ್ದು ಶಿರಾ ಕ್ಷೇತ್ರದಲ್ಲಿ ಮೊದಲ ಗೆಲವು ಆಗಲಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights