ಉಪ ಚುನಾವಣೆ: ರಾಜರಾಜೇಶ್ವರಿ ಮತ್ತು ಶಿರಾದಲ್ಲಿ ಬಿಜೆಪಿಗೆ ಗೆಲುವು!

ಕರ್ನಾಟಕದಲ್ಲಿರುವ ಮೂರು ಪಕ್ಷಗಳಿಗೂ ಪ್ರತಿಷ್ಟೆಯ ಚುನಾವಣೆಯಾಗಿದ್ದ ಆರ್‌ಆರ್‌ನಗರ ಮತ್ತು ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವಿನ ಪತಾಕೆ ಹಾರಿಸಿದೆ.

ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಂತೆಯೇ ಆರ್‌ಆರ್‌ನಗರದಲ್ಲಿ ಮುನಿರತ್ನ ಅವರು ಗೆಲವು ಸಾಧಿಸಿದ್ದಾರೆ.

ಬಿಜೆಪಿಯ ಅಭ್ಯರ್ಥಿ ರಾಜೇಶ್ ಗೌಡ ಅವರು 72,739 ಮತಗಳನ್ನ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ 60,321 ಮತ್ತು ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ 34,707 ವೋಟ್​ಗಳನ್ನ ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 12,418 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಮೊದಲಿನಿಂದಲೂ ಸತತ ಮುನ್ನಡೆ ಸಾಧಿಸುವ ಮೂಲಕ ಗೆಲುವು ಪಡೆದುಕೊಂಡು ಶಿರಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ.


ಇದನ್ನೂ ಓದಿ: RRನಗರ ಉಪಚುನಾವಣೆಯಲ್ಲಿ BJP ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights