ಆರ್ ಆರ್ ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು – ಕನ್ನಡದಲ್ಲಿ ಟ್ವೀಟ್ ಮಾಡಿ ಶುಭ ಕೋರಿದ ಮೋದಿ!

ರಾಜ್ಯ ರಾಜಕೀಯದಲ್ಲಿ ಬಿಜೆಪಿ ತನ್ನ ಬಲವನ್ನು ಭದ್ರಪಡಿಸಿಕೊಂಡಿದೆ. ನಿನ್ನೆ ಹೊರಬಿದ್ದ ಆರ್ ಆರ್ ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಇದು ಬಿಜೆಪಿ ಭದ್ರಕೊಟೆಗೆ ಮತ್ತಷ್ಟು ಪುಷ್ಠಿ ನೀಡಿದೆ. ಗೆಲುವಿನ ಸಂತಸವನ್ನು ರಾಜ್ಯ ಬಿಜೆಪಿ ನಾಯರಕರು ಹಂಚಿಕೊಂಡಿದ್ದಾರೆ. ಪರಸ್ಪರ ಸಿಹಿ ಹಂಚಿ ಶುಭಾಶಯ ಕೋರಿದ್ದಾರೆ. ಮಾತ್ರವಲ್ಲದೇ ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ. ಮತ್ತೊಂದು ವಿಶೇಷವೇನೆಂದರೆ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಶುಭಾಶಯ ತಿಳಿಸಿದ್ದು ರಾಜ್ಯದಲ್ಲಿ ಸಂತಸವನ್ನು ಮತ್ತಷ್ಟು ಇಮ್ಮಡಿಗೊಳಿಸಿದೆ.

ಮೋದಿಯವರು ಕರ್ನಾಟಕಕ್ಕೆ ಆಗಮಿಸಿದಾಗ ಕನ್ನಡದಲ್ಲಿ ಮಾತನಾಡಿದ್ದರು. ಆದರೆ ಈ ಬಾರಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದು ತುಂಬಾನೇ ವಿಶೇಷವಾಗಿದೆ. ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ,  ಕರ್ನಾಟಕದ ಶಿರಾ ಮತ್ತು ರಾಜರಾಕೇಶರಿನಗರದಲ್ಲಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಸಿಎಂ ಯಡಿಯೂರಪ್ಪ ಜಿ ಅವರ ನೇತೃತ್ವದ ಸರ್ಕಾರದ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿ ವಿಶ್ವಾಸವನ್ನು ಇದು ಪುನ:ದೃಢೀಕರಿಸುತ್ತದೆ ಎಂದು ಬರೆದಿದ್ದಾರೆ.

 

ಜೊತೆಗೆ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿದ್ದು, ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಕರ್ನಾಟಕದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದಿನಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು ಎಂದಿದ್ದಾರೆ. 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights