ಬೆಂಗಳೂರು ಡಿಜೆ ಹಳ್ಳಿ ಗಲಬೆ: ಮಾಜಿ ಮೇಯರ್ ಸಂಪತ್‌ರಾಜ್‌ ಬಂಧನ!

ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಆಗಸ್ಟ್‌ 11 ರಂದು ನಡೆದ ಗಲಭೆ ಪ್ರಕರಣಕ್ಕೆ ಸಂಬಂದಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಗಲಭೆಯ ನಂತರ ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್‌ರಾಜ್‌ರನ್ನು ಬಂಧಿಸಲು ಸಿಸಿಬಿ ಪೊಲೀಸರು ಐದು ತಂಡಗಳನ್ನು ಮಾಡಿಕೊಂಡು ಹುಡುಕಾಟ ನಡೆಸಿದ್ದರು.

ಬೆಂಗಳೂರು ಹಾಗೂ ಹೊರ ರಾಜ್ಯಗಳಲ್ಲೂ ಆತನಿಗಾಗಿ ಶೋಧ ನಡೆಸಲಾಗಿತ್ತು. ಈ ನಡುವೆ ಸಂಪತ್‌ರಾಜ್‌ನ ಆಪ್ತ ರಿಯಾಜುದ್ದೀನ್‌ ಎಂಬಾತನ್ನನ್ನು ಬಂಧಿಸಲಾಗಿತ್ತು. ಆತ ನೀಡದ ಸುಳಿವಿನ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ಸಂಪತ್‌ರಾಜ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ನವೀನ್‌ ಎಂಬಾತ ಮೊಹಮ್ಮದ್ ಪೈಗಂಬರ್‌ ವಿರುದ್ಧ ಹಾಕಲಾಗಿದ್ದ ವಿವಾದಿತ ಪೋಸ್ಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನ ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ಗಲಭೆ ನಡೆದಿತ್ತು,. ಈ ಸಂದರ್ಭದಲ್ಲಿ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಯ ಮೇಲೆ ದಾಳಿ ನಡೆಸಿದ್ದರು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ 421 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.


ಇದನ್ನೂ ಓದಿ: ಮಂಡ್ಯ ಡಿಸಿಸಿ ಬ್ಯಾಂಕ್‌ ಚುಣಾವಣೆ: ಕಾಂಗ್ರೆಸ್‌ ಸೋಲಿಸಲು BJP ಮೊರೆಹೋದ JDS

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights