ಇಬ್ಬಾಗವಾದ ಬಳ್ಳಾರಿ: ವಿಜಯನಗರ ಹೊಸ ಜಿಲ್ಲೆ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ!

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಎಂಬ ಹೊಸ ಜಿಲ್ಲೆಯನ್ನು ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.  ಜಿಲ್ಲೆಯ ರಚನೆ ಸಂಬಂಧ ಅಗತ್ಯ ಇರುವ ಪ್ರಕ್ರಿಯೆಗಳ ಬಗ್ಗೆ ಮುಂದಿನ ಸಂಚಿವ ಸಂಪುಟ ಸಭೆಯಲ್ಲಿ ಚರ್ಚಿಸಿಸಲಾಗುವುದು ಎಂದು ಸಂಪುಟ ತೀರ್ಮಾನ ಮಾಡಿದೆ.

ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲು ಒಪ್ಪಿಗೆ ನೀಡಲಾಗಿದೆ. ವಿಜಯನಗರ ಜಿಲ್ಲೆಯಾಗಬೇಕು ಎಂಬುದು ಬಹುದಿನದ ಬೇಡಿಕೆಯಾಗಿತ್ತು. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳ ಬೇಡಿಕೆ ಈಡೇರಿದೆ. ಈ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಾಗುತ್ತದೆ ಎಂದು ಶಾಸಕ ಆನಂದ್ ಸಿಂಗ್ ತಿಳಿಸಿದ್ದಾರೆ.

ಪ್ರಸ್ತಾಪಿತ ವಿಜಯನಗರ ಜಿಲ್ಲೆಗೆ ಈಗ ಬಳ್ಳಾರಿಯಲ್ಲಿರುವ ಹೂವಿನಹಡಗಲಿ, ಕೊಟ್ಟೂರು, ಹರಪನಹಳ್ಳಿ, ಕೂಡ್ಲಿಗಿ, ಹೊಸಪೇಟೆ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳು ಸೇರಲಿವೆ. ಹೊಸಪೇಟೆಯು ಜಿಲ್ಲಾ ಕೇಂದ್ರವಾಗಿರಲಿದೆ ಎಂದು ಮಾಹಿತಿ ನೀಡಲಾಗಿದೆ.

ಈ ಬಾರಿಯ ಚಳಿಗಾಲದ ಅಧಿವೇಶವನ್ನು ಡಿಸೆಂಬರ್ 07 ರಿಂದ 15ರ ವರೆಗೆ ನಡೆಸಲು ನಿರ್ಧರಿಸಲಾಗಿದ್ದು, ಬೆಳಗಾವಿಯ ಬದಲಿಗೆ ಬೆಂಗಳೂರಿನಲ್ಲೇ ಸದನವನ್ನು ನಡೆಸಲು ಸಚಿವ ಸಂಪುಟ ನಿರ್ಧರಿಸಿದೆ.


ಇದನ್ನೂ ಓದಿ: ಅಮೆರಿಕಾ ಕ್ರಾಂತಿಗೂ ಸ್ಪೂರ್ತಿಯಾಗಿದ್ದ ಹೈದರ್ ಮತ್ತು ಟಿಪ್ಪು ಸುಲ್ತಾನ್‌!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights