ಬಿಹಾರದಲ್ಲಿ ಹೀನಾಯ ಸೋಲು: ಕಾಂಗ್ರೆಸ್‌ ಮುಖಂಡರು ರಾಜೀನಾಮೆ?

ಬಿಹಾರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನವನ್ನು ನೀಡಿ, ಸೋಲನ್ನಪ್ಪಿದೆ. ಸೋಲಿನ ಹಿನ್ನೆಲೆಯಲ್ಲಿ ಪಕ್ಷವು ಸೋಲಿನ ಬಗೆಗೆ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಬಿಹಾರದ ಕಾಂಗ್ರೆಸ್‌ ಮುಖಂಡರು ಅಭಿಪ್ರಾಯ ಪಟ್ಟಿದ್ದು, ಪಕ್ಷದಲ್ಲಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಬಿಹಾರಕ್ಕೆ ಎಐಸಿಸಿ ಉಸ್ತುವಾರಿಯಾಗಿರುವ ಶಕ್ತಿಸಿನ್ಹಾ ಗೊಹಿಲ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ಬಿಹಾರ ಕಾಂಗ್ರೆಸ್‌ ಮುಖ್ಯಸ್ಥ ಮಧನ್‌ ಮೋಹನ್‌ ಮೋಹನ್‌ ಝಾ ಮತ್ತು ಹಲವು ಮುಖಂಡರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್‌ ಅತ್ಯಂತ ಕಳಪೆ ಸಾಧನೆ ಮಾಡಿದ್ದು, ಸೋಲಿನ ಬಗೆಗೆ ಸಮಗ್ರ ಪರಿಶೀಲನೆ ನಡೆಸಬೇಕು. ಸೋಲಿನ ಹೊಣೆಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತೇವೆ. ಹೈಕಮಾಂಡ್‌ ನಿರ್ದೇಶನಗಳ ನಂತರ ರಾಜೀನಾಮೆ ಸಲ್ಲಿಸುತ್ತೇವೆ ಎಂದು ಹಿರಿಯ ಮುಖಂಡರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 19ರಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

ಕಾಂಗ್ರೆಸ್ ತನ್ನ ಸಂಘಟನಾ ಸಾಂಸ್ಥಿಕ ಶಕ್ತಿಗಿಂತ ಹೆಚ್ಚಿನ ಸ್ಥಾನಗಳನ್ನು ಸ್ಪರ್ಧಿಸಿದೆ ಎಂದು ನಾನು ಭಾವಿಸುತ್ತೇನೆ. 20 ವರ್ಷಗಳಿಂದ ಬಿಜೆಪಿ ಅಥವಾ ಅದರ ಮಿತ್ರಪಕ್ಷಗಳು ಗೆದ್ದಿದ್ದ 25 ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಲಾಗಿತ್ತು. ಈ ಸ್ಥಾನಗಳಿಂದ ಸ್ಪರ್ಧಿಸಲು ಕಾಂಗ್ರೆಸ್ ನಿರಾಕರಿಸಬೇಕಿತ್ತು. ಪಕ್ಷವು ಕೇವಲ 45 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಬೇಕಿತ್ತು ಎಂದು ಮಾಜಿ ವಿತ್ತ ಸಚಿವ ಸಿದಂಬರಂ ತಿಳಿಸಿದ್ದಾರೆ.

“ಬಿಹಾರ ವಿಧಾನಸಭೆ ಹಾಗೂ ಇತರೆ ರಾಜ್ಯಗಳ ಉಪಚುನಾವಣೆಯಲ್ಲಿ ನಮ್ಮ ಇತ್ತೀಚಿನ ಸಾಧನೆ ಕುರಿತು ಆತ್ಮಾವಲೋಕನದ ಸಮಯ ಮುಗಿದಿದೆ. ಆರು ವರ್ಷಗಳಿಂದ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಂಡಿಲ್ಲ. ಈಗ ಆತ್ಮಾವಲೋಕನ ಮಾಡಿಕೊಳ್ಳುತ್ತದೆ ಎನ್ನುವ ಭರವಸೆ ಇಲ್ಲ.  ಸಾಂಸ್ಥಿಕವಾಗಿ ಏನೇನು ತಪ್ಪುಗಳಿದೆ ಅದೆಲ್ಲದಕ್ಕೂ ನಮ್ಮಲ್ಲಿ ಉತ್ತರಗಳಿವೆ. ಆದರೆ ಕಾಂಗ್ರೆಸ್‌ ನಾಯಕರು ಉತ್ತರಗಳನ್ನು ಗುರುತಿಸಲು ಸಿದ್ಧರಿಲ್ಲ” ಎಂದು ಸಿಬಲ್ ಹೇಳಿದ್ದಾರೆ.


ಇದನ್ನೂ ಓದಿ: ಚುನಾವಣೆಗಳ ಫಲಿತಾಂಶಗಳು ಕಾಂಗ್ರೆಸ್‌ ತಳಮಟ್ಟದಲ್ಲಿ ದುರ್ಬಲವಾಗಿದೆ ಎಂಬುದನ್ನು ತೋರಿಸಿವೆ: ಪಿ.ಚಿದಂಬರಂ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights