ಆರ್‌ಎಸ್‌ಎಸ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಸಚಿವ ಆರ್ ಅಶೋಕ್
ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಆರ್‌ಎಸ್‌ಎಸ್‌ನ ನಿಯಂತ್ರಣದಲ್ಲಿದೆ ಎಂಬುದು ತಿಳಿದಿರುವು ವಿಚಾರ. ಆದರೆ, ಕರ್ನಾಟಕದ ಕಂದಾಯ ಸಚಿವ ಆರ್. ಅಶೋಕ್ ಅವರು ಬಿಜೆಪಿಗೂ ಆರ್‌ಎಸ್‌ಎಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ವಿಧಾನಸಭೆ ಸೇರಿದಂತೆ ಎಲ್ಲೆಡೆ ಬಿಜೆಪಿಯನ್ನು ಆರ್‌ಎಸ್‌ಎಸ್ ನಿಯಂತ್ರಿಸುತ್ತಿದೆ. ಬಿಜೆಪಿ ಸಂಘಪರಿವಾರದ ಕೈಗೊಂಬೆಯಾಗಿದೆ. ಅವರು ಆಡಿಸಿದಂತೆ ಇವರು ಆಡುತ್ತಾರೆ ಎಂದು ಟೀಕಿಸುತ್ತಲೇ ಇದ್ದಾರೆ.
ಈ ಬಗ್ಗೆ ಮಾತನಾಡಿರುವ ಆರ್ ಆಶೋಕ್, ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿಲ್ಲ. ಆರ್‌ಎಸ್‌ಎಸ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ನಾನೂ ಸೇರಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಸಂಘ ಪರಿವಾರದಿಂದಲೇ ಬಂದವರು. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ನಿಜಕ್ಕೂ ಗೊಂದಲವಿರುವುದು ಕಾಂಗ್ರೆಸ್ ನಲ್ಲಿ. ಇದನ್ನು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯೇ ಹೇಳಿದ್ದಾರೆ. ಕಾಂಗ್ರೆಸ್ ತಟ್ಟೆಯಲ್ಲಿ ನೊಣ, ಹೆಗ್ಗಣ ಬಿದ್ದಿದ್ದರೂ ಅದನ್ನು ನೋಡದೇ ಬಿಜೆಪಿ ತಟ್ಟೆಯಲ್ಲಿ ಸೊಳ್ಳೆ ಬಿದ್ದಿರುವುದನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ತಪ್ಪೇನು?: ಮಾಜಿ ಸಿಎಂ ಹೆಚ್‌ಡಿಕೆ

