ಯಡಿಯೂರಪ್ಪನವರ ಕಾರಣದಿಂದಾಗಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ: ರೇಣುಕಾಚಾರ್ಯ
ಸಿಎಂ ಬಿಎಸ್ ಯಡಿಯೂರಪ್ಪನವರ ಒತ್ತಡಕ್ಕೆ ಮಣಿದು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ಮಾನವನ್ನು ನೀಡಲಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡದಿದ್ದರೆ ದೆಹಲಿಯಲ್ಲಿ ಪ್ರತಿಭಟಿಸುವುದಾಗಿ ಒತ್ತಡ ಹಾಕಿದ್ದರು. ಆ ಕಾರಣದಿಂದಾಗಿ ಕನ್ನಡ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ ಇಂದು ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ನಮ್ಮ ಆಕಾಂಕ್ಷೆಗಳನ್ನು ಪಕ್ಷದ ಅಧ್ಯಕ್ಷರಿಗೆ, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಅವರು ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸುವದನ್ನು ವಿರೋಧಿಸುತ್ತಿರುವ ಕನ್ನಡ ಸಂಘಟನೆಗಳನ್ನು ‘ರೋಲ್ ಕಾಲ್ ಸಂಘಟನೆಗಳು’ ಎಂದು ಶಾಸಕ ಯತ್ನಾಳ್ ಕರೆದಿರುವುದರಲ್ಲಿ ತಪ್ಪಿಲ್ಲ. ಅವರು ಸರಿಯಾಗಿಯೇ ಹೇಳಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮರಾಠ ಅಭಿವೃದ್ಧಿ ನಿಗಮ: ಆದೇಶ ಹಿಂಪಡೆಯದಿದ್ದರೆ ಡಿ.05ಕ್ಕೆ ಕರ್ನಾಟಕ ಬಂದ್!
ಯಡಿಯೂರಪ್ಪನವರಿಗೆ ಕನ್ನಡದ ಬಗ್ಗೆ ಇರುವ ಬದ್ಧತೆಯನ್ನು ಪ್ರಶ್ನೆ ಮಾಡಬೇಡಿ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ತಂದಿದ್ದು ಯಡಿಯೂರಪ್ಪನವರು. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಅವರಿಗೆ ಕರೆ ಮಾಡಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನ ನೀಡಬೇಕು . ಇಲ್ಲವಾದರೆ, ದೆಹಲಿಗೆ ಬಂದು ರಾಜಘಾಟ್ ಮುಂದೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಅವರ ಒತ್ತಡಕ್ಕೆ ಮಣಿದ ಯುಪಿಎ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿತ್ತು ಎಂದು ಹೇಳಿದ್ದಾರೆ.
ಮರಾಠ ಜನಾಂಗದ ಅಭಿವೃದ್ಧಿಗೆ ಮಾಡಿರುವ ನಿಗಮ ಇದು. ಮರಾಠಿ ಭಾಷೆಯ ಪ್ರಾಧಿಕಾರ ಅಲ್ಲ. ಕರ್ನಾಟಕದಲ್ಲಿ ಹುಟ್ಟಿರುವ ಮರಾಠಿ ಭಾಷೆಯೆ ಮಾತನಾಡಲು ಬರದ ಮರಾಠ ಜನಾಂಗಕ್ಕೆ ಮಾಡಿದ ನಿಗಮ ಇದಾಗಿದೆ. ಈ ನಿಗಮಕ್ಕೂ ಮರಾಠ ಭಾಷೆಗೂ ಯಾವುದೇ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಉಪಚುನಾವಣೆಗೆ JDS ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ: ಹೆಚ್‌ಡಿಕೆ

