ಬಿಎಸ್‌ವೈ ರಾಜಕೀಯ ಆಪ್ತಕಾರ್ಯದರ್ಶಿ ಎಂ.ಆರ್ ಸಂತೋಷ್ ಆತ್ಮಹತ್ಯೆಗೆ ಯತ್ನ!

ಮುಖ್ಯಮಂತ್ರಿಗಳ ರಾಜಕೀಯ ಆಪ್ತಕಾರ್ಯದರ್ಶಿ ಎಂ ಆರ್ ಸಂತೋಷ್ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು.

ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂ ಆರ್ ಸಂತೋಷ್, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಭೇಟಿ ನೀಡಿ ಈಗಾಗಲೇ ಆಸ್ಪತ್ರೆಯ ವೈದ್ಯರಿಂದ ಆರೋಗ್ಯವನ್ನು ವಿಚಾರಿಸುತ್ತಿದ್ದು, ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರವನ್ನು ಹೇಗಾದರೂ ಮಾಡಿ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿ ಶಾಸಕ ನಾಗಬೇಕು ಎಂಬ ಆಸೆಯನ್ನು ಹೊತ್ತಿದ್ದ ಸಂತೋಷ್ ಮೂರ್ನಾಲ್ಕು ತಿಂಗಳಿನಿಂದ ಅರಸೀಕೆರೆ ಕ್ಷೇತ್ರದ ಸಾಮಾಜಿಕ ಚಟುವಟಿಕೆಗಳಲ್ಲಿ ಮತ್ತು ರಾಜಕೀಯವಾಗಿ ಮುಂಚೂಣಿಯಲ್ಲಿದ್ದರು.

ಮೇ 28ರಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹಾಸನ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸಿದ್ದರು. ಇಷ್ಟೇ ಅಲ್ಲದೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರನ್ನ ಪ್ರತಿ ಕಾರ್ಯಕ್ರಮಗಳಲ್ಲಿಯೂ ವಿರೋಧಿಸುತ್ತ ಬಂದಿದ್ದ ಸಂತೋಷ, ಕೆ ಎನ್ ಶಿವಲಿಂಗೇಗೌಡರ ಲೋಪದೋಷಗಳನ್ನು ಎತ್ತಿ ಹಿಡಿಯುವ ಮೂಲಕ ಮಾತಿನ ಮೂಲಕವೇ ಹರಿಹಾಯ್ದಿದ್ದರು.

ಇದಲ್ಲದೆ ಅರಸೀಕೆರೆ ಕ್ಷೇತ್ರಕ್ಕೆ ಬಂದ ಬಳಿಕ ಸ್ವಪಕ್ಷೀಯರ ಜೊತೆ ಹೊಂದಾಣಿಕೆ ಇಲ್ಲದೆ ಬಿಜೆಪಿ ಪಕ್ಷದಲ್ಲಿ ಎರಡು ಬಣಗಳಾಗಿತ್ತು. ಸಂತೋಷ್ ವಿರೋಧಿ ಬಣ ವಾಗಿರುವ ಮತ್ತೊಂದು ಬಿಜೆಪಿ ತಂಡ ಸಂತೋಷ್ ಸಾಂಸಾರಿಕ ಜೀವನದ ವಿಚಾರವನ್ನ ಎಳೆದು ಅವರಿಗೆ ಹಿಂದೆಯೇ ಅಪಮಾನ ಮಾಡಿದರು.

ಇದಾದ ಬಳಿಕ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿತ್ತು. ಜೊತೆಗೆ ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿ ಜೊತೆಯು ಕೂಡ ಒಡನಾಟದಲ್ಲಿ ಬಿರುಕು ಬಿಟ್ಟಿತ್ತು ಎನ್ನಲಾಗಿತ್ತು. ಆದರೆ ಇಂದು ಪುಸ್ತಕ ಓದುವ ಸಲುವಾಗಿ ಎರಡನೇ ಮಹಡಿ ಗೆ ತೆರಳಿದ ಎನ್. ಆರ್ ಸಂತೋಷ ಮಾನಸಿಕ ಖಿನ್ನತೆಗೆ ಒಳಗಾಗಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಸದ್ಯ ಅಸ್ವಸ್ಥಗೊಂಡಿರುವ ಸಂತೋಷ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಇದನ್ನೂ ಓದಿ: ಬಿಜೆಪಿಯಲ್ಲಿ ಬಿಎಸ್‌ವೈ ನಿಷ್ಟರು- ಹೈಕಮಾಂಡ್‌ ನಿಷ್ಟರೆಂಬ ಎರಡು ಬಣ; ಯಾರಿಗೆ ಹೆಚ್ಚು ಸಚಿವ ಸ್ಥಾನ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights