ಬೆಂಗಳೂರು ಮೆಟ್ರೋ ನಿಲ್ದಾಣದಲ್ಲೇ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಆರಂಭ..!
ಸಾಂಕ್ರಾಮಿಕ ರೋಗದಿಂದ ಮೆಟ್ರೋ ನಿಲ್ದಾಣದಲ್ಲಿ ಕ್ಯಾಶ್, ಟೋಕನ್ ಹಾಗೂ ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಮಾಡುವ ವ್ಯವಸ್ಥೆಗೆ ಕಡಿವಾಣ ಹಾಕಲಾಗಿತ್ತು. ಸದ್ಯ ಮೆಟ್ರೋ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಗೆ ಅವಕಾಶ ಕಲ್ಪಿಸಲಾಗಿದೆ.
ಹೌದು… ಕೊರೊನಾ ಮಧ್ಯೆ ಮೆಟ್ರೋ ಚಾಲನೆಗೊಂಡ ತಿಂಗಳಾದರೂ ಕೌಂಟರ್ ಗಳನ್ನು ಬಂದ್ ಮಾಡಲಾಗಿತ್ತು. ಆನ್ ಲೈನ್ ಮೂಲಕ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಿಸಿಕೊಂಡ ಪ್ರಯಾಣಿಕರಿಗೆ ಮಾತ್ರ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶವಿತ್ತು. ಹೀಗಾಗಿ ಪ್ರಯಾಣಿಕರ ಸಂಖ್ಯೆಯೂ ಕಡಿಮೆಯಾಗಿತ್ತು. ಆದರೆ ಈಗ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡುವುದನ್ನ ಬಿಎಂಆರ್ ಸಿಎಲ್ ಪುನ: ಆರಂಭಿಸಿದೆ. ಆದರೆ ಈವರೆಗೂ ಇನ್ನೂ ಟೋಕನ್ ನೀಡುವ ವ್ಯವಸ್ಥೆ ಮಾತ್ರ ಆರಂಭವಾಗಿಲ್ಲ.
ಈ ಬಗ್ಗೆ ಮಾತನಾಡಿದ ಬಿಎಂಆರ್ ಸಿಎಲ್ ಕಾರ್ಯಕಾರಿ ನಿರ್ದೇಶಕ ಎ ಎಸ್ ಶಂಕರ್, ” ಜನ ದಟ್ಟಣೆಯನ್ನು ತಪ್ಪಿಸಲು ನಿಲ್ದಾಣದಲ್ಲಿ ಟೀಕನ್ ಹಾಗೂ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಗೆ ನಿರ್ಬಂಧ ಹೇರಲಾಗಿತ್ತು. ಆದರೆ ಈಗ ಸ್ಮಾರ್ಟ್ ಕಾರ್ಡ್ ರಿಚಾರ್ಜ್ ಮಾಡಿಸಲು ಅವಕಾಶ ನೀಡಲಾಗಿದೆ. ಆದರೆ ಪ್ರಯಾಣಿಕರು ಸಾಧ್ಯವಾದಷ್ಟು ಆನ್ ಲೈನ್ ರೀಚಾರ್ಜ್ ಮಾಡಿಸಿಕೊಳ್ಳುವುದು ಉತ್ತಮ. ಇದರಿಂದ ಜನದಟ್ಟಣೆ ಸಾಮಾಜಿಕ ಅಂತರ ಕಾಪಾಡಲು ಸಾಧ್ಯವಾಗುತ್ತದೆ” ಎಂದಿದ್ದಾರೆ.

