ಮಾಧ್ಯಮಗಳು ಸುದ್ದಿಯನ್ನು ಅವರೇ ಸೃಷ್ಟಿಸಿ ಪ್ರಸಾರ ಮಾಡುತ್ತಾರೆ: ಇವನ್ನೆಲ್ಲ ನಿರ್ಲಕ್ಷಿಸಿ: ವೈಎಸ್ವಿ ದತ್ತಾ
ನಮ್ಮ ತಲೆಗೂ ಬಾರದ ಆಲೋಚನೆಗಳನ್ನು ಮಾಧ್ಯಮದವರೇ ಸೃಷ್ಟಿಸುತ್ತಾರೆ. ಅವರೇ ಸುದ್ದಿಯನ್ನು ಸೃಷ್ಟಿಸುತ್ತಾರೆ. ಅವರೇ ಪ್ರಸಾರ ಮಾಡಿಕೊಳ್ಳುತ್ತಾರೆ. ನಮ್ಮ ವಿಚಾರದಲ್ಲಿ ಸುದ್ದಿ ಸೃಷ್ಟಿಸಿ ಪ್ರಸಾರ ಮಾಡುವ ಮುನ್ನ ನಮ್ಮ ಪತ್ರಿಕ್ರಿಯೆ ಪಡೆದುಕೊಳ್ಳಬೇಕು ಎಂಬುದು ಮಾಧ್ಯಮಗಳಿಗಿಲ್ಲ ಎಂದು ಮಾಧ್ಯಮಗಳ ಸುಳ್ಳುಸುದ್ದಿಗಳ ವಿರುದ್ಧ ಮಾಜಿ ಶಾಸಕ ವೈಎಸ್ವಿ ದತ್ತಾ ಕಿಡಿಕಾರಿದ್ದಾರೆ.
ಜೆಡಿಎಸ್ ನಾಯಕ ವೈಎಸ್ವಿ ದತ್ತಾ ಅವರು ಜೆಡಿಎಸ್ ತೊರೆಯಲಿದ್ದಾರೆ ಎಂದು ಕೆಲವು ಮಾಧ್ಯಮಗಳು ಸುದ್ದಿ ಮಾಡಿದ್ದವು. ಇವುಗಳ ವಿರುದ್ದ ಕಿಡಿಕಾರಿರುವ ದತ್ತಾ, ನನ್ನ ತಲೆಯಲ್ಲಿ ಇದುವರೆಗೂ ಬಂದಿಲ್ಲದ ಆಲೋಚನೆಯನ್ನು ಟಿವಿ ಅವರು ಒಂದು ಸುದ್ದಿ ಅಂತ ಪ್ರಸಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನೆನ್ನೆ ರಾತ್ರಿ ತಾನೆ ದೇವೇಗೌಡರ ಮನೆಗೆ ಹೋಗಿ ಅವರ ಆರೋಗ್ಯ ವಿಚಾರಿಸಿಕೊಂಡು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳ ಬಗ್ಗೆ ಮಾತನಾಡಿಕೊಂಡು ಬಂದಿದ್ದೇನೆ. ನನ್ನ ತಲೆಯಲ್ಲಿ ಇದುವರೆಗೂ ಬಂದಿಲ್ಲದ ಆಲೋಚನೆಯನ್ನು ಟಿವಿ ಅವರು ಒಂದು ಸುದ್ದಿ ಅಂತ ಪ್ರಸಾರ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ವೈ. ಎಸ್. ವಿ. ದತ್ತಾ, ಸುದ್ದಿಯನ್ನು ಇವರೇ ಸೃಷ್ಟಿಸಿ ಪ್ರಸಾರ ಮಾಡುವ ಮುನ್ನ ನಮ್ಮದೊಂದು ಪ್ರತಿಕ್ರಿಯೆ ಕೇಳಬೇಕಲ್ಲವೇ ?? ಸುಮ್ಮನೆ ಇವನ್ನೆಲ್ಲ ನಿರ್ಲಕ್ಷಿಸಿ. ಪಕ್ಷ ಸಂಘಟನೆ ಕಡೆ ಗಮನ ಕೊಡೋಣ.ಮೊನ್ನೆ ಪಕ್ಷ ಸಂಘಟನೆ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದೇನೆ ಅದರ ಕಡೆ ಗಮನ ಕೊಡೋಣ ಎಂದಿದ್ದಾರೆ.
ಸುದ್ದಿಯನ್ನು ಇವರೇ ಸೃಷ್ಟಿಸಿ ಪ್ರಸಾರ ಮಾಡುವ ಮುನ್ನ ನಮ್ಮದೊಂದು ಪ್ರತಿಕ್ರಿಯೆ ಕೇಳಬೇಕಲ್ಲವೇ ?? ಸುಮ್ಮನೆ ಇವನ್ನೆಲ್ಲ ನಿರ್ಲಕ್ಷಿಸಿ. @JanataDal_S ಪಕ್ಷ ಸಂಘಟನೆ ಕಡೆ ಗಮನ ಕೊಡೋಣ.ಮೊನ್ನೆ ಪಕ್ಷ ಸಂಘಟನೆ ಬಗ್ಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಪಕ್ಷದ ಕಚೇರಿಯಲ್ಲಿ ಮಾತನಾಡಿದ್ದೇನೆ ಅದರ ಕಡೆ ಗಮನ ಕೊಡೋಣ. 2/2
— YSV Datta (@YSV_Datta) December 1, 2020
2018ರ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ವೈ. ಎಸ್. ವಿ. ದತ್ತಾ 46,860 ಮತಗಳನ್ನು ಪಡೆದು ಬಿಜೆಪಿಯ ಕೆ. ಎಸ್. ಪ್ರಕಾಶ್ ವಿರುದ್ಧ ಸೋಲು ಕಂಡಿದ್ದಾರೆ. ಅಂದಿನಿಂದಲೂ ಅವರು ಜೆಡಿಎಸ್ ತೊರೆಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಪ್ರತಿ ಬಾರಿಯೂ ದತ್ತಾ ಈ ಸುದ್ದಿಗಳಿಗೆ ಸ್ಪಷ್ಟನೆಯನ್ನು ಕೊಡುತ್ತಾರೆ.
ಇದನ್ನೂ ಓದಿ: ಗ್ರಾಮ ಪಂಚಾಯತಿ ಚುನಾವಣಾ ದಿನಾಂಕ ಪ್ರಕಟ: ನೀತಿಸಂಹಿತೆ ಜಾರಿ!

