ಏರುತ್ತಲೇ ಇದೆ ಪೆಟ್ರೋಲ್‌ ಬೆಲೆ; ಈ ವಾರದಲ್ಲಿ ಏರಿಕೆ ಆಗಿದ್ದು ಎಷ್ಟು ಗೊತ್ತೇ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದೆ. ಆದರೆ, ಭಾರತದಲ್ಲಿ ಮಾತ್ರ ಪೆಟ್ರೋಲ್‌-ಡೀಸೆಲ್‌ ಬೆಲೆ ಏರುತ್ತಲೇ ಇದೆ. ದೇಶಾದ್ಯಂತ ಹೇರಲಾದ ಲಾಕ್‌ಡೌನ್‌ನಿಂದಾಗಿ ಉದ್ಯೋಗ, ಆರ್ಥಿಕ ಭದ್ರತೆಯನ್ನು ಕಳೆದುಕೊಂಡು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೂ ಸಹ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನೋಪಯೋಗಿ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ. ಇದರಲ್ಲಿ ದಿನನಿತ್ಯ ಏರಿಕೆ ಕಾಣುತ್ತಿರುವುದು ಪೆಟ್ರೋಲ್‌-ಡೀಸೆಲ್‌ ಬೆಲೆ. ಈ ವಾರದಲ್ಲೂ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸಿದೆ.

ನವೆಂಬರ್ 27, 27 ಹಾಗೂ 28ರಂದು ನಿರಂತರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಲಾಗಿತ್ತು. ಮತ್ತೀಗ ಡಿಸೆಂಬರ್ 2ರಂದು ಪುನಃ ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳ ಮಾಡಲಾಗಿದೆ.

ಪ್ರತಿ ಲೀಟರ್ ಪೆಟ್ರೋಲ್ ಮೇಲೆ ನವೆಂಬರ್ 27ರಂದು 19 ಪೈಸೆ, ಪ್ರತಿ ಲೀಟರ್ ಡೀಸೆಲ್ ಮೇಲೆ 24 ಪೈಸೆ ಏರಿಕೆಯಾಗಿದೆ. ನವೆಂಬರ್ 28ರಂದು  ಪೆಟ್ರೋಲ್ 24 ಪೈಸೆ, ಡೀಸೆಲ್ 27 ಪೈಸೆ ಏರಿಕೆ ಮಾಡಲಾಗಿದೆ. ನವೆಂಬರ್ 29ರಂದು ಪೆಟ್ರೋಲ್  21 ಪೈಸೆ, ಡೀಸೆಲ್  29 ಪೈಸೆ ಏರಿಸಲಾಗಿತ್ತು. ಡಿಸೆಂಬರ್ 2ರಂದು ಪೆಟ್ರೋಲ್ 15 ಪೈಸೆ ಹಾಗೂ ಡೀಸೆಲ್ 23 ಪೈಸೆ ಏರಿಕೆ ಮಾಡಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ‌ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ.

ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ‌ ಸತ್ಸಂಪ್ರದಾಯವನ್ನು ಮರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಏರಿಕೆ ಆಗದಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಲೇ ಇದೆ.

ಲಾಕ್ಡೌನ್ ಮತ್ತು ಕೊರೊನಾ ವ್ಯಾಪಕವಾಗಿ ಜನರ ಮೇಲೆ ದುಷ್ಪರಿಣಾಮ ಬೀರಿದ್ದ ಜೂನ್ ತಿಂಗಳಲ್ಲಿ ಬರೋಬ್ಬರಿ 23 ದಿನ‌ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು.

ಜುಲೈ ತಿಂಗಳಿನಲ್ಲೂ 8 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿತ್ತು. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಗಳಲ್ಲಿ ಮಧ್ಯೆ ಮಧ್ಯೆ ಹೆಚ್ಚಳ ಮಾಡಲಾಗಿತ್ತು. ಈಗ ನವೆಂಬರ್ ತಿಂಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತಿದೆ.


ಇದನ್ನೂ ಓದಿ: ಭಾರತದ ರೈತರ ಪ್ರತಿಭಟನೆಗೆ ಕೆನಡಾ ಪ್ರಧಾನಿ ಬೆಂಬಲ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights