ಡಿ.ಜೆ ಹಳ್ಳಿ ಗಲಭೆ ಪ್ರಕರಣ : ಮತ್ತೋರ್ವ ಮಾಸ್ಟರ್ ಮೈಂಡ್ ಅರೆಸ್ಟ್…!

ಡಿ.ಜೆ. ಹಳ್ಳಿ ಗಲಭೆ ಪ್ರಕರಣದಲ್ಲಿ ಮತ್ತೋರ್ವ ಮಾಸ್ಟರ್ ಮೈಂಡ್ ಜಾಕೀರ್ ಬಂಧನವಾಗಿದೆ. ಕಳೆದ 2 ತಿಂಗಳಿನಿಂದ ಈತ ತಲೆ ಮರಿಸಿಕೊಂಡಿದ್ದು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಳ್ಳುತ್ತಿದ್ದ. ಸದ್ಯ ರಾಪ್ರೋರೇಟರ್ ಜಾಕೀರ್ ನನ್ನ ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ ಹಳ್ಳಿ ಗಲಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಕಾರ್ಪೋರೇಟರ್ ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟೀಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗದೇ ಜಾಕೀರ್ ತಲೆ ಮರೆಸಿಕೊಂಡಿದ್ದರು. ಬುಧವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದು ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಪೊಲೀಸರು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲಿದ್ದಾರೆ.

ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಕಾರ್ಪೋರೇಟರ್ ಜಾಕೀರ್ ಬಂಧನ | DJ halli Riots: CCB Arrest Corporator Zakir - Kannada Oneindia

ಜಾಕೀರ್ ಪುಲಿಕೇಶಿನಗರ ಕಾರ್ಪೋರೇಟರ್. ಮಾಜಿ ಮೇಯರ್ ಸಂಪತ್ ರಾಜ್ ಮತ್ತು ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಕೀರ್ ಅವರ ಹಿಂದೆ ಪುತ್ರ ಇರುವ ಬಗ್ಗೆ ಸಿಸಿಬಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡುತ್ತಿದ್ದಂತೆ ಇಬ್ಬರೂ ತಲೆ ಮರೆಸಿಕೊಂಡಿದ್ದರು.ಅನಾರೋಗ್ಯದ ನೆಪ ನೀಡಿ ಆಸ್ಪತ್ರೆ ದಾಖಲಾಗಿದ್ದ ಸಂಪತ್ ರಾಜ್ ರಾತ್ರೋ ರಾತ್ರಿ ತಲೆ ಮರೆಸಿಕೊಂಡಿದ್ದರು. ಅದೇ ಸಂದರ್ಭದಲ್ಲಿ ಜಾಕೀರ್ ಕೂಡ ನಾಪತ್ತೆಯಾಗಿದ್ದರು. ಇತ್ತೀಚೆಗೆ ಬೆಂಗಳೂರಿನಲ್ಲಿ ಸಂಪತ್ ರಾಜ್ ಬಂಧನಕ್ಕೆ ಒಳಗಾಗಿದ್ದರು. ಇದೀಗ ಮಾಜಿ ಮೇಯರ್ ಸಂಪತ್ ರಾಜ್ ಅವರ ಆಪ್ತರಾದ ಎ.ಆರ್. ಜಾಕೀರ್ ಕೂಡ ಬಂಧನಕ್ಕೆ ಒಳಗಾಗಿದ್ದಾರೆ.

ಜಾಕೀರ್ ಪಾತ್ರ ಏನು? ಜಾಕೀರ್ ಮತ್ತು ಸಂಪತ್ ರಾಜ್ ಕಾಂಗ್ರೆಸ್ ಪಕ್ಷದ ಮುಖಂಡರು. ಮೇಯರ್ ಆಗಿದ್ದ ಸಂಪತ್ ರಾಜ್ ಪುಲಿಕೇಶಿನಗರ ಕ್ಷೇತ್ರದಲ್ಲಿ ಶಾಸಕನಾಗುವ ಹಂಬಲ. ಅದೇ ರೀತಿ ಜಾಕೀರ್ ಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕನಾಗುವ ಹೆಬ್ಬಯಕೆ. ಈ ಇಬ್ಬರು ನಾಯಕರು ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದರು. ಅವಕಾಶ ಸಿಕ್ಕರೆ ಅದನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದರು. ಇದರ ಭಾಗವಾಗಿಯೇ ಡಿ.ಜೆ ಹಳ್ಳಿ ಗಲಭೆ ಸೂತ್ರದಾರರು ಆದರೇ ಎಂಬ ಅನುಮಾನ ಮೂಡಿಸುತ್ತದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights