ದೇಶಾದ್ಯಂತ 36,594 ಹೊಸ ಕೊರೊನಾ ಕೇಸ್ : 95.7 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!

ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 36,594 ಹೊಸ ಕೊರೊನಾವೈರಸ್ ಪ್ರಕರಣಗಳನ್ನು ದಾಖಲಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 95.7 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 540 ಜನ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಭಾರತದ ಕೊರೊನವೈರಸ್ ಸಾವಿನ ಸಂಖ್ಯೆ 1,39,188 ಕ್ಕೆ ಏರಿದೆ.

ಸಕ್ರಿಯ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಈಗ 4,16,082 ಆಗಿದ್ದರೆ, ಚೇತರಿಸಿಕೊಂಡ ಪ್ರಕರಣಗಳ ಸಂಖ್ಯೆ 90,16,289 ಆಗಿದೆ. ಒಂದೇ ದಿನದಲ್ಲಿ ದೇಶ 42,916 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾರತದಲ್ಲಿ ಕೊರೊನವೈರಸ್ ಪ್ರಕರಣಗಳು 95 ಲಕ್ಷ ದಾಟುತ್ತಿದ್ದಂತೆ, ದೇಶ ಈಗ ಐದು ಕೋವಿಡ್ -19 ಲಸಿಕೆ ಅಭ್ಯರ್ಥಿಗಳ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸುತ್ತಿದೆ ಮತ್ತು ಅವರಲ್ಲಿ ಇಬ್ಬರು ಸ್ಥಳೀಯ ಅಭ್ಯರ್ಥಿಗಳಾಗಿದ್ದಾರೆ.

ಭಾರತದಲ್ಲಿ ಒಂದೇ ದಿನ 11,70,102 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 14,47,27,749 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights