ರಸ್ತೆಗಳಿಲ್ಲ, ಕುಡಿಯಲು ಶುದ್ಧ ನೀರಿಲ್ಲ; ಗ್ರಾಮ ಪಂ. ಚುನಾವಣೆ ಬಹಿಷ್ಕಾರಕ್ಕೆ ಹಳ್ಳಿಗರ ನಿರ್ಧಾರ!
ಹಳ್ಳಿಗಳ ಮೂಲಭೂತ ಸೌಕರ್ಯಗಳಾದ ಸರಿಯಾದ ರಸ್ತೆ. ಒಳಚರಂಡಿ ವ್ಯವಸ್ಥೆ, ಮತ್ತು ಸ್ವಚ್ಛ ಕುಡಿಯುವ ನೀರನ ಸೌಲಭ್ಯ ತಮ್ಮ ಊರುಗಳಿಗಿಲ್ಲ. ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲವಾದರೆ ಮುಂದಿನ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸುವುದಾಗಿ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಜಿಗಳೂರು ಗ್ರಾಮಸ್ಥರು ಮತ್ತು ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮಸ್ಥರು ತಿಳಿಸಿದ್ದಾರೆ.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಪದೇ ಪದೇ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ,ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಲು ವಿಫಲರಾಗಿದ್ದಾರೆ. ಶುಕ್ರವಾರ ಕೂಡ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದ್ದೇವೆ. ಈಗಲೂ ಸಮಸ್ಯೆಗೆ ಸ್ಪಂದಿಸದಿದ್ದರೆ ಗ್ರಾಮಪಂಚಾಯತ್ ಕಚೇರಿ ಮುಂದೆ ಮುಳ್ಳಿನ ಗಿಡ ಹಾಕುತ್ತೇವೆ. ಅಲ್ಲದೆ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ರೋಣದಲ್ಲಿ ಹೊಸಹಳ್ಳಿ ಸೇರಿದಂತೆ 10 ಗ್ರಾಮಗಳು ಎಲ್ಲವೂ ಅಭಿವೃದ್ಧಿ ಆಗಬೇಕಿದೆ, ಅಧಿಕಾರಿಗಳು ತಮ್ಮ ಬೇಡಿಕೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ, ಇಲ್ಲಿ ಪಿಡಿಒಗಳು ಪದೇ ಪದೇ ವರ್ಗಾವಣೆ ಆಗುತ್ತಿದ್ದಾರೆ, ಹೀಗಾಗಿ ಗ್ರಾಮ ಪಂಚಾಯತ್ ಚುನಾವಣೆ ಕಚೇರಿಯನ್ನು ಜಿಗಳೂರಿಗೆ ಶಿಫ್ಟ್ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕಳೆದ ಬಾರಿಯೂ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಬೆದರಿಕೆ ಹಾಕಿದ್ದರು, ಆದರೆ ನಂತರ ಮನವೊಲಿಸಿ ಚುನಾವಣೆಯಲ್ಲಿ ಭಾಗವಹಿಸಿದರು. ಆದರೆ ಬಾರಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ತಿಳಿಸಿದ್ದಾರೆ. ಸಾವಿರಾರು ಮಂದಿ ಸಹಿ ಸಂಗ್ರಹಿಸಿದ್ದು ಜಿಗಳೂರು ಗ್ರಾಮಪಂಚಾಯಿತಿ ಬದಲಾವಣೆಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಗ್ರಾ.ಪಂ. ಚುನಾವಣೆ ಮುಂದೂಡುವಂತೆ ಮನವಿ : ಚುನಾವಣಾ ಆಯೋಗದ ವಿರುದ್ಧ ಸುಧಾಕರ್ ಅಸಮಧಾನ!

