ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೋಮಾಂಸ ರಫ್ತು ಹೆಚ್ಚಾಗಿದೆ: ಸಿದ್ದರಾಮಯ್ಯ

ರಾಜ್ಯದ ಬಿಜೆಪಿ ಸರ್ಕಾರ ಅಧಿವೇಶನದಲ್ಲಿ ಚರ್ಚೆ ತರೆದೇ ತರಾತುರಿಯಲ್ಲಿ ಏಕಪಕ್ಷೀಯವಾಗಿ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಿದೆ. ಆದರೆ, ವಿಧಾನ ಪರಿಷತ್‌ನ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಸಭಾಪತಿಗಳು ಮುಂದೂಡಿರುವುದರಿಂದಾಗಿ ಮಸೂದೆ ಪರಿಷತ್‌ನಲ್ಲಿ ಅಂಗೀಕರಾಗೊಂಡಿಲ್ಲ. ಬಿಜೆಪಿಯು ಮಸೂದೆಯನ್ನು ತರಾತುರಿಯಲ್ಲಿ ಅಂಗೀಕರಿಸಿದ ನಡೆಯನ್ನು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಆರೋಪಿಸಿ ಅಧಿವೇಶನವನ್ನು ಬಹಿಷ್ಕರಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದು, ಮೋದಿ ಸರ್ಕಾರ ಬಂದ ಮೇಲೆ ಗೋಮಾಂಸ ರಫ್ತು ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಚರ್ಮದ ವ್ಯಾಪಾರ ಉದ್ಯಮಕ್ಕೆ ಧಕ್ಕೆಯಾಗಲಿದೆ. 25 ಲಕ್ಷ ಕುಟುಂಬಗಳು ಚರ್ಮೋದ್ಯೋಗದಲ್ಲಿದ್ದಾರೆ. ಸುಮಾರು 8 ಲಕ್ಷ ಪರಿಶಿಷ್ಟ ಜಾತಿಯ ಜನರು ಚರ್ಮ ಸುಲಿಯುವ ಕೆಲಸ ಮಾಡುತ್ತಿದ್ದಾರೆ. ಚರ್ಮೋದ್ಯೋಗದಿಂದ 5.5 ಬಿಲಿಯನ್ ಡಾಲರ್ಸ್ ಜಿಡಿಪಿ ಆದಾಯ ಇದೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೋಮಾಂಸ ರಫ್ತ ಹೆಚ್ಚಾಗಿದೆ ಎಂದು ವಾರಣಾಸಿಯ ಸ್ವರೂಪಾನಂದ ಸ್ವಾಮಿ ಸರಸ್ವತಿ ಹೇಳಿದ್ದಾರೆ. ಗೋಮಾಂಸ ರಫ್ತಿಗೆ ಪರವಾನಗಿ ನೀಡಿ, ಗೋಹತ್ಯೆ ನಿಷೇಧಿಸುತ್ತೇವೆ ಎಂದುಬು ಏಕೆ? ಎಂದು ಪ್ರಶ್ನಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ ರೈತರ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ರೈತರು ವಯಸ್ಸಾದ ಹಸುಗಳನ್ನು ಬೀದಿಗೆ ಬಿಡಬೇಕಾಗುತ್ತದೆ. ಆಗ ಬೇರೆಯವರ ಜಮೀನುಗಳಿಗೆ ಹಸುಗಳು ನುಗ್ಗಿ ಗಲಾಟೆಗಳು ಆಗುತ್ತವೆ. ಸಣ್ಣ ರೈತರು, ಕೂಲಿ ಕಾರ್ಮಿಕರಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಹಾಕಲ್ಲ; ರಾಜ್ಯಪಾಲರು

ನಾವು ಸಹ ಗೋಮಾತೆಯನ್ನು ಪೂಜಿಸುತ್ತೇವೆ. ದೀಪಾವಳಿ ಹಬ್ಬದಂದೂ ನಾವು ಹಸುಗಳಿಗೆ ಎಡೆ ಹಾಕುತ್ತೇವೆ. ಒಂದು ಹಸುಗೆ ದಿನಕ್ಕೆ ಕನಿಷ್ಠ 6 ಕೆಜಿ ಮೇವು ಬೇಕು. ಸರ್ಕಾರವೇ ದುಡ್ಡು ಕೊಟ್ಟು ಗೋ ಶಾಲೆಗಳನ್ನು ನಡೆಸಬೇಕಾಗುತ್ತದೆ. ಸರ್ಕಾರದಿಂದ ಪ್ರಾಕ್ಟಿಕಲ್ ಆಗಿ ಗೋವುಗಳನ್ನು ಗೋಶಾಲೆಯಲ್ಲಿ ಸಾಕಲು ಸಾಧ್ಯವೇ? ಇದು ಸರ್ಕಾರಕ್ಕೂ ಹೊರೆಯಾಗುವುದಿಲ್ಲವೇ? ಸರ್ಕಾರವು ತಜ್ಞರ ಸಮಿತಿಯೊಂದನ್ನು ರಚಿಸಲಿ, ಇದರ ಸಾಧಕ- ಭಾದಕಗಳ ಬಗ್ಗೆ ವ್ಯಾಪಕ ಚರ್ಚೆ, ಪರಿಶೀಲನೆ ನಡೆಸಿ ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದರು.

ಕೃಷಿ ಕೆಲಸಗಳಿಗೆ ತೊಡಗಿಸಿಕೊಳ್ಳಲಾಗದ, ಅನುತ್ಪಾದಕ ಗೋವುಗಳನ್ನು ಸರ್ಕಾರವೇ ಕೊಂಡುಕೊಳ್ಳಲಿ. ಜನಸಾಮಾನ್ಯರ ಮೇಲೆ ಏಕೆ ಹೊರೆ ಹಾಕುತ್ತೀರಿ. ಬಿಜೆಪಿ ಬೆಂಬಲಿಗರೇ ಗೋಮಾಂಸ ರಫ್ತು ಮಾಡುತ್ತಿದ್ದಾರೆ. ಸ್ಪೀಕರ್ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ. ಸ್ಪೀಕರ್ ಆರ್ ಎಸ್ ಎಸ್ ಕಡೆಯವರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿ ಬೇನಾಮಿ ಆಸ್ತಿ ಹೊಂದಿದ್ದಾರೆ; ಅದರ ರಕ್ಷಣೆಗಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ: ಸಿದ್ದರಾಮಯ್ಯ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights