ಪ್ರತಿಭಟನಾ ನಿರತರ ಮೇಲೆ ಹರಿದ ಕಾರು : ಆರು ಜನರಿಗೆ ಗಂಭೀರ ಗಾಯ..!
ವಲಸೆ ಮತ್ತು ಕಸ್ಟಮ್ಸ್ ಜಾರಿ ಏಜೆಂಟರು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದವರ ಮೇಲೆ ಏಕಾಏಕಿ ಕಾರು ಹರಿದಿದ್ದು ಘಟನೆಯಲ್ಲಿ ಆರಕ್ಕಿಂತಲೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೌದು.. ನ್ಯೂಯಾರ್ಕ್ ನಗರದ ಮ್ಯಾನ್‌ಹ್ಯಾಟನ್‌ನ ಮುರ್ರೆ ಹಿಲ್ ಪ್ರದೇಶದಲ್ಲಿ ಶುಕ್ರವಾರ ಸಂಜೆ 4:08 ಕ್ಕೆ ಪ್ರತಿಭಟನೆ ಮಾಡುತ್ತಿದ್ದ ಜನರ ಮೇಲೆ ಕಾರು ಹರಿದಿದೆ. ಆ ಸಮಯದಲ್ಲಿ 40 ರಿಂದ 50 ಪ್ರತಿಭಟನಾಕಾರರು ಈ ಪ್ರದೇಶದಲ್ಲಿದ್ದರು ಎನ್ನಲಾಗುತ್ತಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಯಾವುದೇ ಸಾವು ಸಂಭವಿಸಿಲ್ಲ ಎಂದು ನ್ಯೂಯಾರ್ಕ್ ಪೊಲೀಸ್ ಇಲಾಖೆಯ ವಕ್ತಾರರು ಎಎಫ್‌ಪಿಗೆ ತಿಳಿಸಿದ್ದಾರೆ.
ಇದು ಉದ್ದೇಶಪೂರ್ವಕವೋ ಅಥವಾ ಟ್ರಾಫಿಕ್ ಅಪಘಾತವೋ ಎಂದು ತಿಳಿಯಲು ತನಿಖೆ ಮಾಡಲಾಗುತ್ತಿದೆ ಎಂದು ವಕ್ತಾರರು ಹೇಳಿದ್ದಾರೆ. ಚಾಲಕ ಬಂಧಿಯಾಗಿರುವ ಬಗ್ಗೆ ಇನ್ನೂ ತಿಳಿದುಬಂದಿಲ್ಲ.
ಈ ಕಾರು ನೌಕಾಪಡೆಯ ಬಿಎಂಡಬ್ಲ್ಯು ಆಗಿದ್ದು, ಇಬ್ಬರು ಮಹಿಳೆಯರು ಮುಂಭಾಗದ ಸೀಟ್ ಗಳಲ್ಲಿ ಕುಳಿತಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಎನ್‌ಬಿಸಿಗೆ ತಿಳಿಸಿದ್ದಾರೆ. ಕಾರು ಚಾಲಕ ಉದ್ದೇಶಪೂರ್ವಕವಾಗಿಯೇ ಕಾರು ಹರಿಸಿದ್ದಾರೆ. ನಾನು ಕಿರುಚಿಕೊಳ್ಳುತ್ತಿರುವಾ ಅವರು ಪಲಾಯನ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

