ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ; ಸೇನಾಧಿಕಾರಿ ವಿರುದ್ಧ ಎಫ್‌ಐಆರ್‌!

ಸ್ನೇಹಿತನ ಹೆಂಡತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರ್ಮಿ ಕರ್ನಲ್ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಕಾನ್ಪುರದ ಕಂಟೋನ್ಮೆಂಟ್ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಪತಿ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಸೇನಾಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅವರ ಪತ್ನಿ ಪತ್ನಿ ರಷ್ಯಾ ಮೂಲದವರಾಗಿದ್ದು, 10 ವರ್ಷಗಳಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ ಎಂಬುದಾಗಿ ದೂರಿನಲ್ಲಿ ವಿವರಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಪೂರ್ವ) ರಾಜ್ ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.

“ಲೆಫ್ಟಿನೆಂಟ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಬಡ್ತಿ ಪಡೆದ ಸಂದರ್ಭದಲ್ಲಿ ಕರ್ನಲ್ ತನ್ನನ್ನು ಹಾಗೂ ತನ್ನ ಹೆಂಡತಿಯನ್ನು ಪಾರ್ಟಿಗೆ ಆಹ್ವಾನಿಸಿದ್ದ. ಪಾರ್ಟಿಯಲ್ಲಿ ತನಗೆ ಪ್ರಜ್ಞೆ ತಪ್ಪುವಂತೆ ಡ್ರಗ್ಸ್‌ ಕೊಟ್ಟು, ತನ್ನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪ್ರತಿರೊಧವೊಡ್ಡಿದ ಸಂತ್ರಸ್ತೆಯ ಮೇಲೂ ಹಲ್ಲೆ ಮಾಡಿದ್ದಾನೆ ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ವಿವರಿಸಿದ್ದಾರೆ” ಎಂದು ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಬಾಯ್ಕಾಟ್ ಅಂಬಾನಿ-ಅದಾನಿ; ಕಾರ್ಪೊರೇಟ್‌ಗಳನ್ನು ಸಮರ್ಥಿಸಿಕೊಳ್ಳುತ್ತಿರುವುದೇಕೆ ಸುವರ್ಣ ನ್ಯೂಸ್‌?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights