ಟಿಎಂಸಿ ತೊರೆದಿದ್ದ ಸುವೆಂಡು ಅಧಿಕಾರಿ ಬಿಜೆಪಿಗೆ ಸೇರ್ಪಡೆ!

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಸಿಡಿದೆದ್ದು, ಟಿಎಂಸಿ ತೊರೆದಿದ್ದ ಸುವೆಂಡು ಅಧಿಕಾರಿ ಇಂದು ಅಮಿತ್‌ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.

ಮೊದಲಿಗೆ ಮಮತಾ ಬ್ಯಾನರ್ಜಿಯವರ ಆಪ್ತರಾಗಿದ್ದ ಸುವೆಂಡು ಅಧಿಕಾರಿ, ಕಾಲನಂತರ ಮಮತಾ ಬ್ಯಾನರ್ಜಿ ವಿರುದ್ಧ ಬಂಡಾಯ ಎದ್ದಿದ್ದರು. ಕೆಲವು ದಿನಗಳ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ನಿನ್ನೆ ಎಂಎಲ್‌ಎ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಆದರೆ, ಶಾಸಕ ಸ್ಥಾನಕ್ಕೆ ಅವರು ನೀಡಿರುವ ರಾಜೀನಾಮೆ ಅಂಗೀಕಾರವಾಗಿಲ್ಲ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಭೇಟಿ ನೀಡಿದ್ದು, ಅವರ ಸಮ್ಮುಖದಲ್ಲಿ ಸುವೆಂಡು ಅಧಿಕಾರಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ಟಿಎಂಸಿಯಸದಸ್ಯರಿಗೆ ಪತ್ರ ಬರೆದಿರುವ ಸುವೇಂಡು ಅಧಿಕಾರಿ, ತೃಣಮೂಲ ಕಾಂಗ್ರೆಸ್‌ನಲ್ಲಿ ಆಳವಾದ ಕೊಳೆತ ಮತ್ತು ಅಸ್ವಸ್ಥತೆ ಉಂಟಾಗಿದೆ, ಒಂದೇ ದಿನದಲ್ಲಿ ಯಾವುದೇ ವ್ಯಕ್ತಿಯಿಂದ ಟಿಎಂಸಿ ಸ್ಥಾಪನೆಯಾಗಿಲ್ಲ.ಇದು ಬೃಹತ್ ಪ್ರಮಾಣದಲ್ಲಿ ನಿರಂತರ ಪ್ರಯತ್ನವಾಗಿತ್ತು ಎಂದು ಬರೆದಿದ್ದಾರೆ.


ಇದನ್ನೂ ಓದಿ: ಪಕ್ಷ ತೊರೆಯುತ್ತಿದೆ ಟಿಎಂಸಿ ಶಾಸಕರ ದಂಡು; ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರ??!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights