ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಳಿನ್ ಕಟೀಲ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ಮಾಡಿದ್ದಾರೆ.

ಮೊನ್ನೆಯಷ್ಟೇ ಡಿಕೆ ಶಿವಕುಮಾರ್ ಹಾಗೈ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂಬ ಹೇಳಿಕೆ ಬೆನ್ನೆಲ್ಲೆ ನಳಿನ್ ಈ ರೀತಿ ನುಡಿದಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಮುಂದಿನ ವರ್ಷಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬುದನ್ನು ಮನಗಂಡು ಈ ರೀತಿ ಮಾತನಾಡುತ್ತಿದ್ದಾರೆ. ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಈ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಇಂದಿನ ಕಾರ್ಯಕಾರಣಿ ಸಭೆಯಲ್ಲಿ ಲವ್ ಜಿಹಾದ್ ಬಗ್ಗೆ ಚರ್ಚಿಸಲಾಗುವುದು. ನಾಳಿನ ವಿಶೇಷ ಸಭೆಯಲ್ಲೂ ಚರ್ಚೆ ನಡೆಸಲಾಗುವುದು. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights