ಮತ್ತೊಂದು ನಿರ್ಭಯಾ ಪ್ರಕರಣ; ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಪ್ತಾಂಗಕ್ಕೆ ರಾಡ್‌ ಹಾಕಿ ಸಾಮೂಹಿಕ ಅತ್ಯಾಚಾರ-ಕೊಲೆ

2012ರಲ್ಲಿ ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದಂತಹ ಮತ್ತೊಂದು ಪ್ರಕರಣಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದೆ. ಉತ್ತರ ಪ್ರದೇಶದ ಬಾದಾನ್ ಜಿಲ್ಲೆಯ ಥಾನಾ ಪ್ರದೇಶದಲ್ಲಿರುವ ದೇವಸ್ಥಾನಕ್ಕೆ ತೆರಳಿದ್ದ 50 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಅಕೆಯ ಗುಪ್ತಾಂಗಕ್ಕೆ ರಾಡ್‌ ತರಹದ ವಸ್ತುವನ್ನು ಹಾಕಿ ಕೊಲೆ ಮಾಡಲಾಗಿದೆ.

ಮರಣಾನಂತರ  ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಖಾಸಗಿ ಭಾಗಗಳಿಗೆ ರಾಡ್ ತರಹದ ವಸ್ತುವನ್ನು ಹಾಕಲಾಗಿದೆ ಎಂದು ಕಂಡು ಬಂದಿದೆ. ಆಕೆಯ ಮೇಲೆ ಭಾರವಾದ ವಸ್ತುವಿನಿಂದ ಹಲ್ಲೆ ಮಾಡಲಾಗಿದ್ದು, ಎಡ ಪಕ್ಕೆಲುಬುಗಳು, ಎಡಗಾಲು ಮತ್ತು ಎಡ ಶ್ವಾಸಕೋಶಕ್ಕೂ ಹಾನಿಗೊಂಡಿವೆ ಎಂದು ತಿಳಿದು ಬಂದಿದೆ.

ಅತಿಯಾದ ರಕ್ತಸ್ರಾವದಿಂದ ಮಹಿಳೆ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ ನಡೆದ ದೇವಾಲಯದ ಅರ್ಚಕ ಮಹಂತ್ ಮತ್ತು ಆತನ ಮೂವರು ಸಹಚರರ ವಿರುದ್ಧ ಉಘೈತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈವರೆಗೆ ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಹತ್ರಾಸ್‌ ಪ್ರಕರಣ: ಸಾಮೂಹಿಕ ಅತ್ಯಾಚಾರ ಎಸಗಿ; ಕೊಲೆಗೈದಿದ್ದಾರೆ; ಸಿಬಿಐ ಜಾರ್ಜ್‌ಶೀಟ್‌

ಸಂತ್ರಸ್ತೆಗೆ ಪ್ರತಿದಿನ ದೇವಸ್ಥಾನ್ಕಕ್ಕೆ ಹೋಗುವ ಅಭ್ಯಾಸವಿತ್ತು. ಅದೇ ರೀತಿ ಆಕೆ ಭಾನುವಾರವೂ ದೇವಸ್ಥಾನಕ್ಕೆ ತೆರಳಿದ್ದರು. ಅದರೆ, ಅಕೆ ಹಿಂದಿರುಗಿರಲಿಲ್ಲ. ತಡರಾತ್ರಿಯಲ್ಲಿ ರಕ್ತಸ್ರಾವವಾಗಿದ್ದ ಮಹಿಳೆಯನ್ನು ದುಷ್ಕರ್ಮಿಗಳು ಕಾರಿನಲ್ಲಿ ತಂದು ಬಿಟ್ಟು ಹೋದರು ಎಂದು ಸ್ಥಳೀಯರು ಹೇಳಿರುವುದಾಗಿ ತಿಳಿದು ಬಂದಿದೆ.

ದೂರು ನೀಡಿದರು ಉಘೈತಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅವರು ಪ್ರಕರಣದಲ್ಲಿ ತಡ ಮಾಡುತ್ತಿದ್ದಾರೆ. ಸರಿಯಾಗಿ ಪರಿಶೀಲನೆ ನಡೆಸುತ್ತಿಲ್ಲ. ಘಟನೆ ನಡೆದ 18 ಗಂಟೆಗಳ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ ಎಂದು ಸಂತ್ರಸ್ಥೆಯ ಕುಟುಂಬ ಆರೋಪಿಸಿದೆ.

ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಘೈತಿಯ ಪೊಲೀಸ್ ಠಾಣೆ ಅಧಿಕಾರಿ ರವೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.


ಇದನ್ನೂ ಓದಿ: ಅಪ್ರಾಪ್ತ ಬಾಲಕಿಯನ್ನು ಕೊಂದು, ಮೃತ ದೇಹದ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights