ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ ಪ್ರಕರಣ : ಪತ್ನಿ, ಆಪ್ತ ಸಹಾಯಕ ಸಾವು..!

ಕರ್ನಾಟಕದಲ್ಲಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಗಾಯಗೊಂಡಿದ್ದು, ಅವರ ಪತ್ನಿ ಮತ್ತು ಆಪ್ತ ಸಹಾಯಕ ಮೃತಪಟ್ಟಿದ್ದಾರೆ. ಅಪಘಾತದ ನಂತರ ಗಂಭೀರವಾಗಿ ಗಾಯಗೊಂಡಿದ್ದ ಅವರ ಪತ್ನಿ ಮತ್ತು ಅವರ ವೈಯಕ್ತಿಕ ಕಾರ್ಯದರ್ಶಿ ದೀಪಕ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಯೆಲ್ಲಾಪುರದಿಂದ ರಾಜ್ಯದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದಾಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಈ ಅಪಘಾತ ಸಂಭವಿಸಿದ್ದು, ಕೇಂದ್ರ ಆಯುಷ್ (ಸ್ವತಂತ್ರ) ಮತ್ತು ರಕ್ಷಣಾ ರಾಜ್ಯ ಸಚಿವರಾಗಿರುವ ಶ್ರೀ ನಾಯಕ್ ಅಪಾಯದಿಂದ ಪಾರಾಗಿದ್ದು, ಬಾಂಬೋಲಿಮ್‌ನ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದಲ್ಲಿ ಸಚಿವರು ಚಲಿಸುತ್ತಿದ್ದ ಬಿಳಿ ಬಣ್ಣದ ಟೊಯೋಟಾ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದೆ.

ಘಟನಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರೊಂದಿಗೆ ಮಾತನಾಡಿದ್ದು ನಾಯಕ್ ಅವರ ಚಿಕಿತ್ಸೆಗೆ ಸರಿಯಾದ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಪ್ರಮೋದ್ ಸಾವಂತ್ ಅವರೊಂದಿಗೆ ಮಾತನಾಡಿ ಉತ್ತಮ ಚಿಕಿತ್ಸೆಗೆ ಸೂವಿಸಿದ್ದಾರೆ. ಅಗತ್ಯವಿದ್ದಲ್ಲಿ ನಾಯಕ್ ಅವರನ್ನು ದೆಹಲಿಗೆ ಕಳುಹಿಸಿಕೊಡುವಂತೆ ಸೂಚಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಟ್ವಿಟ್ಟರ್ ನಲ್ಲಿ ನಾಯಕ್ ಅವರ ಪತ್ನಿ ವಿಜಯಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಶ್ರೀ ನಾಯಕ್ ಅವರ ಪತ್ನಿ ವಿಜಯಾ ಅವರ ನಿಧನದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸಂತಾಪವನ್ನು ಟ್ವೀಟ್ ಮಾಡಿದ್ದಾರೆ. “ವಿಜಯ ನಾಯಕ್ ಜಿ ಅವರ ಪತ್ನಿ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ಕೇಳಿ ತೀವ್ರ ದುಃಖಿತವಾಗಿದೆ. ಮಾನ್ಯ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಜಿ ಅವರನ್ನು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತಾ, ಈ ನಷ್ಟವನ್ನು ನಿವಾರಿಸಲು ದೇವರು ಅವರಿಗೆ ಮತ್ತು ಅವರ ಕುಟುಂಬಕ್ಕೆ ಶಕ್ತಿಯನ್ನು ನೀಡುತ್ತಾರೆ ಎಂದು ಭಾವಿಸುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights