ಧಾರವಾಡ ರಸ್ತೆ ಅಪಘಾತ : ಸಾವಿನ ಸಂಖ್ಯೆ 13ರಕ್ಕೇರಿಕೆ : ಸಂತಾಪ ಸೂಚಿಸಿದ ಮೋದಿ!

ಧಾರವಾಡದ ಇಟ್ಟಿಗಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿಕೆಯಾಗಿದೆ.

ದಾವಣಗೆರೆಯಿಂದ ಗೋವಾ ಟ್ರಿಪ್ ಗೆ ಹೋಗುತ್ತಿದ್ದ ಟ್ರಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದಿದ್ದು ಸಾವಿನ ಸಂಖ್ಯೆ 13ಕ್ಕೇರಿದೆ. ಧಾರವಾಡದ ಇಟ್ಟಿಗಟ್ಟಿ ರಾಷ್ಟ್ರಿಯ ಹೆದ್ದಾರಿ 4ರಲ್ಲಿ ಬೆಳಿಗಿನ ಜಾವ 7.30 ಕ್ಕೆ ಭೀಕರ ಅಪಘಾತ ಸಂಭವಿಸಿದ್ದು ಪಿಎಂ ಮೋದಿ ಘಟನೆಗೆ ಸಂತಾಪ ಸೂಚಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಯಾಣಿಸುತ್ತಿದ್ದ ಮಿನಿ ಬಸ್‌ನಲ್ಲಿ ಸಾವಿಗೀಡಾದವರಲ್ಲಿ ಹೆಚ್ಚಾಗಿ ಮಹಿಳೆಯರಿದ್ದಾರೆ. ಇಟ್ಟಿಗಟ್ಟಿ ಕ್ರಾಸಿಂಗ್ ಬಳಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಎದುರು ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಪ್ರಯಾಣಿಕರು ಗೋವಾ ಟ್ರಿಪ್ ತೆರಳುತ್ತಿದ್ದರು. ಘಟನೆ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕಾಂತ್ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿಯೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಧಾರವಾಡ ರಸ್ತೆ ಅಪಘಾತದ ಬಗ್ಗೆ ಬೇಸರ ವ್ಯಕ್ತಪಡಿಸಿದ ಪಿಎಂ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು “ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ರಸ್ತೆ ಅಪಘಾತದಿಂದಾಗಿ ಪ್ರಾಣಹಾನಿ ದುಃಖಿತವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರನ್ನು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.

ಮುಖ ಮತ್ತು ದೇಹ ನಜ್ಜುಗುಂಜಾಗಿರುವುದರಿಂದ ದೇಹಗಳನ್ನು ಗುರುತು ಕೂಡ ಸಿಗುತ್ತಿಲ್ಲ.ಆಸ್ಪತ್ರೆಯ ಬಳಿ ಸಂಬಂಧಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ದೇಹಗಳ ಮುಖವೇ ಗುರುತು ಸಿಗದೇ ಇರುವಂತಹ ಸ್ಥಿತಿಯನ್ನು ನೋಡಿ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ರಸ್ತೆ ಅಪಘಾತದಲ್ಲಿ ಮಾಜಿ ಶಾಸಕರ ಸೊಸೆ ದುರ್ಮಣ ಹೊಂದಿದ್ದಾರೆ. ಸ್ತ್ರೀರೋಗ ತಜ್ಞೆ ವೀಣಾ ಪ್ರಕಾಶ್, ಮಂಜುಳು, ರಾಜೇಶ್ವರಿ ಸೇರಿ 13 ಜನ ಸಾವನ್ನಪ್ಪಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights