ಚುನಾವಣಾ ಸಮೀಕ್ಷೆ: ಬಂಗಾಳದಲ್ಲಿ ಮಮತಾ; ತಮಿಳಲ್ಲಿ ಸ್ಟ್ಯಾಲಿನ್‌ಗೆ‌ ಅಧಿಕಾರ; BJPಗೆ ಮುಖಭಂಗ?

2021ರಲ್ಲಿ ಹಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿವೆ. ಪ್ರಮುಖವಾಗಿ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು, ಬಂಗಾಳ ಮತ್ತು ತಮಿಳುನಾಡು ಹೆಚ್ಚು ಸದ್ದು ಮಾಡುತ್ತಿವೆ. ಅಸ್ಸಾಂ ಚುನಾವಣೆ ಮುನ್ನೆಲೆಗೆ ಬಾರದೇ ಇದ್ದರೂ, ಬಿಜೆಪಿಗೆ ಅಸ್ಸಾಂ ಗೆಲ್ಲಲೇ ಬೇಕಾದ ಚುನಾವಣೆಯಾಗಿದೆ.

ಈ ಮಧ್ಯೆ, ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್, ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಒಕ್ಕೂಟ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಎಬಿಪಿ-ಸಿವೋಟರ್ ಅಭಿಪ್ರಾಯ ಸಮೀಕ್ಷೆ ತಿಳಿಸಿದ್ದು, ಬಂಗಾಳ ಮತ್ತು ದ್ರಾವಿಡ ನಾಡಲ್ಲಿ ಅಧಿಕಾರ ಹಿಡಿಯುತ್ತೇವೆ ಎಂದು ಬೊಬ್ಬಿರಿಯುತ್ತಿರುವ ಬಿಜೆಪಿಗೆ ಎರಡೂ ರಾಜ್ಯಗಳಲ್ಲಿ ಮುಖಭಂಗವಾಗುವ ಸಾಧ್ಯತೆ ಹೆಚ್ಚಾಗಿದೆ.

ಬಂಗಾಳದಲ್ಲಿ ಟಿಎಂಸಿ ಮತ್ತೊಂದು ಬಾರಿ ಅಧಿಕಾರದ ಗದ್ದುಗೆ ಏರಲಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಅಣ್ಣಾಡಿಎಂಕೆ ಪಕ್ಷವನ್ನು ಸೋಲಿಸಿ ಡಿಎಂಕೆ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೆ, ಪುದುಚೇರಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‌ಡಿಎ ನಡುವೆ ತೀವ್ರ ಹಣಾಹಣಿ ನಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸಮೀಕ್ಷೆ ಉಲ್ಲೇಖಿಸಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳಕ್ಕಿಂತ ಅಸ್ಸಾಂ ಚುನಾವಣೆ ಷಾ-ಮೋದಿಗೆ ಅತ್ಯಂತ ನಿರ್ಣಾಯಕ!

ತಮಿಳುನಾಡಿನಲ್ಲಿ ಆಡಳಿತ ವಿರೋಧ ಅಲೆ ಭಾರೀ ಪ್ರಮಾಣದಲ್ಲಿದ್ದು, ಎಐಡಿಎಂಕೆ-ಬಿಜೆಪಿ ಮೈತ್ರಿ ಸೋಲನ್ನು ಅನುಭವಿಸಲಿದೆ. ದ್ರಾವಿಡ ನಾಡಿನ 234 ಕ್ಷೇತ್ರಗಳ ಪೈಕಿ 158-166 ಕ್ಷೇತ್ರಗಳನ್ನು ಡಿಎಂಕೆ ಪಡೆದುಕೊಳ್ಳಲಿದೆ. ಆಡಳಿತಾರೂಢ ಅಣ್ಣಾಡಿಎಂಕೆ ಪಕ್ಷವು 60-68 ಸ್ಥಾನಕ್ಕೆ ಕುಸಿಯಲಿದೆ. ಉಳಿದ ಪಕ್ಷಗಳು 06-10 ಸ್ಥಾನಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದೆ.

ಕೇರಳದಲ್ಲಿ ಸಿಪಿಐ (ಎಂ) ನೇತೃತ್ವದ ಸರ್ಕಾರವು ಮತ್ತೆ ಅಧಿಕಾರಕ್ಕೆ ಬರಲಿದೆ. 140 ಸದಸ್ಯರ ವಿಧಾನಸಭೆಯಲ್ಲಿ ಎಲ್‌ಡಿಎಫ್ 80-89 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದ್ದರೆ, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ 49-57 ಸ್ಥಾನಗಳಿಗೆ ಸೀಮಿತವಾಗಲಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಬಿಜೆಪಿ ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪೈಪೋಟಿ ನೀಡಲಿದೆ. ಆದರೂ, ತೃಣಮೂಲ ಕಾಂಗ್ರೆಸ್ 154-162 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ 98-106 ಕ್ಷೇತ್ರಗಳಲ್ಲಿ ಗೆಲ್ಲಬಹುದು. ಅಲ್ಲದೆ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿ 26-34 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬಂಗಾಳದಲ್ಲಿ ಬಿಜೆಪಿಗೆ ಮತಗಳ ಪ್ರಮಾಣ ಏರಿಕೆಯಾಗಲಿದೆ. ಕಳೆದ ಚುನಾವಣೆ (2016)ಯಲ್ಲಿ ಶೇ. 10.2 ರಷ್ಟು ಮತಗಳಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ ಶೇ. 37.5 ರಷ್ಟು ಮತಗಳನ್ನು ಪಡೆದುಕೊಳ್ಳಲಿದೆ. ಟಿಎಂಸಿಯ ಮತಗಳಿಗೆ ಪ್ರಮಾಣದಲ್ಲಿ ಶೇ.1.9 ರಷ್ಟು ಕುಸಿತಗೊಳ್ಳುವ ಸಾಧ್ಯತೆಯಿದ್ದು, ಶೇ.43ರಷ್ಟು ಮತಗಳನ್ನು ಪಡೆದುಕೊಳ್ಳಬಹುದು ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಕಾಂಗ್ರೆಸ್‌-ಸಿಪಿಎಂ ಮೈತ್ರಿ; BJP-TMCಗಳನ್ನು ಮೀರಿಸಿ ಅಧಿಕಾರ ಹಿಡಿಯುತ್ತಾ ಎಡರಂಗ!

ಆದರೆ, ಕಳೆದ ಚುನಾವಣೆಯಲ್ಲಿ ಎರಡನೇ ಸ್ಥಾನದಲ್ಲಿದ್ದ, ಮತ್ತು ಟಿಎಂಸಿ ನಂತರದ ಓಟ್‌ಶೇರ್‌ ಪಡೆದುಕೊಂಡಿದ್ದ (ಶೇಕಡಾ 32) ಕಾಂಗ್ರೆಸ್‌-ಎಡಪಕ್ಷಗಳ ಮೈತ್ರಿಯು ಈ ಬಾರಿ 11.8 ಶೇಕಡಾ ಮತಗಳಿಗೆ ಕುಸಿಯದೆ. ಇವುಗಳ ಮತಗಳು ಬಿಜೆಪಿ ತೆಕ್ಕೆಗೆ ಹೋಗಲಿವೆ ಎಂದು ಹೇಳಲಾಗಿದೆ.

ಅಸ್ಸಾಂನ 126 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 73-81 ಸ್ಥಾನಗಳನ್ನು ಆಯಾಸ ರಹಿತವಾಗಿ ಗೆಲ್ಲಲಿದೆ. ಯುಪಿಎ 36 ರಿಂದ 44 ಸ್ಥಾನಗಳು ದೊರೆಯಲಿವೆ ಎಂದು ಹೇಳಿದೆ.

30 ಸದಸ್ಯರ ಬಲಿರುವ ಪುದುಚೇರಿಯಲ್ಲಿ ಈ ಬಾರಿ ಭಾರೀ ಪೈಪೋಟಿ ನಡೆಯಲಿದ್ದು, ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಆಡಳಿತಾರೂಢ ಕಾಂಗ್ರೆಸ್‌ ಒಕ್ಕೂಟವು 14-18ಕ್ಕೆ ಕುಸಿಯಲಿದ್ದು, ಬಿಜೆಪಿ 14-18 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ದೇಶದ ಚಿತ್ತ ತಮಿಳುನಾಡಿನತ್ತ! ಕುತೂಹಲ ಕೆರಳಿಸಿದೆ ದ್ರಾವಿಡ ನಾಡಿನ ಚುನಾವಣೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights