ಮಹಾರಾಷ್ಟ್ರದ ಪುಣೆಯಲ್ಲಿ ಕೋವಿಶೀಲ್ಡ್ ಸೀರಮ್ ಇನ್‌ಸ್ಟಿಟ್ಯೂಟ್‌ನಲ್ಲಿ ಬೆಂಕಿ…!

ಮಹಾರಾಷ್ಟ್ರದ ಪುಣೆಯ ಕೋವಿಶೀಲ್ಡ್ ಸೀರಮ್ ಇನ್‌ಸ್ಟಿಟ್ಯೂಟ್‌ನ ನಿರ್ಮಾಣ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.  ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು ರಕ್ಷಣೆಯಲ್ಲಿ ತೊಡಗಿದ್ದಾರೆ.

ಕೊರೊನಾ ಲಸಿಕೆ ಕೋವಿಶೀಲ್ಡ್ ನಿರ್ಮಾಣದ ಸೀರಮ್ ಇನ್‌ಸ್ಟಿಟ್ಯೂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಕ್ಕಪಕ್ಕದ ಅಂಗಡಿ ಮತ್ತು ಮನೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಕಟ್ಟಡದಿಂದ ದಟ್ಟವಾಗಿ ಹೊಗೆ ಮುಗಿಲು ಮುಟ್ಟಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಮುಂಜಾಗೃತ ದೃಷ್ಟಿಯಿಂದ ಸುತ್ತಲ ಜನರನ್ನು ಸ್ಥಳಾಂತರಿಸಲಾಗಿದ್ದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

ಘಟನೆಯಲ್ಲಿ ಸಾವು ನೋವುಗಳ ಬಗ್ಗೆ ವರದಿಯಾಗಿಲ್ಲ. ಆದರೆ ದಟ್ಟವಾಗಿ ಹೊಗೆ ಹರಡಿದ್ದು ಜನರಿಗೆ ತೊಂದರೆಯಾಗಿರಬಹುದು ಎನ್ನಲಾಗುತ್ತಿದೆ. ಘಟನೆಗೆ ಕಾರಣವೇನು ಎನ್ನುವ ವಿಚಾರ ಇನ್ನೂ ತಿಳಿದು ಬಂದಿಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights