ಧನಂಜಯ್ ಮುಂಡೆ ವಿರುದ್ಧದ ಅತ್ಯಾಚಾರ ದೂರನ್ನು ಹಿಂಪಡೆದ ಮಹಿಳೆ..!
ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಧನಂಜಯ್ ಮುಂಡೆ ಅವರ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆ ತನ್ನ ದೂರನ್ನು ಹಿಂತೆಗೆದುಕೊಂಡಿದ್ದಾರೆ.
ಮುಂಡೆ ಅವರೊಂದಿಗೆ ಒಮ್ಮತದ ಸಂಬಂಧ ಹೊಂದಿದ್ದಳು ಎನ್ನಲಾಗುತ್ತಿದ್ದ ಮಹಿಳೆಯ ಸಹೋದರಿ ಸಾಮಾಜಿಕ ನ್ಯಾಯಕ್ಕಾಗಿ ಸಚಿವ ಮೇಲೆ ವಿವಾಹದ ನೆಪದಲ್ಲಿ ತಮ್ಮ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಜನವರಿ 11 ರಂದು ಪೊಲೀಸರನ್ನು ಸಂಪರ್ಕಿಸಿದ್ದರು. ಮುಂಬೈ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು. ಆದರೀಗ ಮಹಿಳೆ ಪ್ರಕರಣವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ವಿಷಯವನ್ನು ಕ್ಲೋಸ್ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಿಳೆ ಓಶಿವಾರಾ ಪೊಲೀಸರಿಗೆ ದೂರು ನೀಡಿದ ಬಳಿಕ ಮುಂಡೆ ಅತ್ಯಾಚಾರ ಆರೋಪವನ್ನು ನಿರಾಕರಿಸಿದ್ದರು. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಇದು ಗಂಭೀರ ಆರೋಪ ತನಿಖೆ ಆಗಬೇಕು ಎಂದು ಹೇಳಿದ್ದರು. ದೂರು ನೀಡಿದ ಕೂಡಲೇ ಬಿಜೆಪಿ ಮುಖಂಡ ಕೃಷ್ಣ ಹೆಗ್ಡೆ ಮತ್ತು ಎಂಎನ್‌ಎಸ್ ಕಾರ್ಯಕರ್ತ ಮನೀಶ್ ಧುರಿ ಅವರು ಪೊಲೀಸರನ್ನು ಸಂಪರ್ಕಿಸಿ ದೂರುದಾರರನ್ನು ಹಿಂಬಾಲಿಸುತ್ತಿದ್ದಾರೆ ಮತ್ತು ಹನಿಟ್ರಾಪ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.
“ಮಹಿಳೆ ನಮಗೆ ಲಿಖಿತ ಹೇಳಿಕೆಯನ್ನು ನೀಡಿದ್ದಾಳೆ, ಅವರು ದೂರನ್ನು ಹಿಂಪಡೆಯಲು ಬಯಸಿದ್ದಾರೆ” ಎಂದು ಅಧಿಕಾರಿ ಹೇಳಿದರು. ತನ್ನ ದೂರನ್ನು ರಾಜಕೀಯ ಕಾರಣಗಳಿಗಾಗಿ ಬಳಸಲಾಗುತ್ತಿದೆ ಎಂದು ಮಹಿಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

