ಗಣಿಗಾರಿಕೆ ತಡೆಯಲು ಸಾಧ್ಯವಿಲ್ಲ; ಅಕ್ರಮವಾಗಿ ನಡೆಸುವವರು ಸಕ್ರಮ ಮಾಡಿಸಿಕೊಳ್ಳಬೇಕು: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಗಣಿಗಾರಿಕೆ ನಿಲ್ಲಿಸಲು ಸಾಧ್ಯವಿಲ್ಲ. ಗಣಿಗಾರಿಕೆಗೆ ಅವಕಾಶ ನೀಡಬೇಕಾಗಿದೆ. ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಕೊಟ್ಟು ಸಕ್ರಮ ಮಾಡಿಸಿಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ. ಪರವಾನಗಿ ಇದ್ದರೆ ಮಾತ್ರ ಗಣಿಗಾರಿಕೆ ನಡೆಸಲು ಅವಕಾಶ ಎಂದು ಅವರು ಹೇಳಿದ್ದಾರೆ.
ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿ, ಕಾಮಗಾರಿಗಳು ಅಪಾರ ಪ್ರಮಾಣದಲ್ಲಿ ನಡೆಯುತ್ತಿವೆ. ಹೀಗಾಗಿ ಕಲ್ಲು ಗಣಿಗಾರಿಕೆ ಅಗತ್ಯ. ಹಾಗೆಂದು ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ. ಅನುಮತಿ ಪಡೆದು ಗಣಿಗಾರಿಕೆ ಮಾಡಿಲು ಅಭ್ಯಂತರ ಇಲ್ಲ ಎಂದು ಹೇಳಿದ್ದಾರೆ.
ಅಕ್ರಮವಾಗಿ ಗಣಿಗಾರಿಗೆ ಮಾಡುವವರ ಮೇಲೆ 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದ ಸ್ಪೋಟ ನಡೆದ ಸ್ಥಳಕ್ಕೆ ಸಂಸದರು, ಗಣಿ ಸಚಿವರು, ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದುರಂತದ ಸ್ಥಳಕ್ಕೆ ಶೀಘ್ರದಲ್ಲೇ ನಾನೇ ಭೇಟಿ ನೀಡುತ್ತೇನೆ. ಲಾರಿಯಲ್ಲಿ ಜಿಲೆಟಿನ್ ತರಲು ಯಾರು ಅವಕಾಶ ನೀಡಿದ್ದರು ಎಂಬುದರ ಕುರಿತಂತೆಯೂ ಪರಿಶೀಲಿಸುತ್ತೇ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸಿಎಂ ಬಿಎಸ್‌ವೈರನ್ನೇ ಹೊರಗಿಟ್ಟು ಸಭೆ ನಡೆಸಿದ ಅಮಿತ್ ಶಾ; ನಾಯಕತ್ವ ಬದಲಾವಣೆಯ ಮುನ್ಸೂಚನೆ?

