BJP ಮಾತಿಗೆ ಮಣಿದ ಹಜಾರೆ; ಅನ್ನದಾತರ ಉಪವಾಸಕ್ಕೆ ನೀಡಿದ್ದ ಬಂಬಲ ಹಿಂಪಡೆದ ಅಣ್ಣಾ!

ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಇಂದು (ಶನಿವಾರ) ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದ್ದಾರೆ. ರೈತರ ಕರೆಗೆ ಬೆಂಬಲ ನೀಡಿದ್ದ ಅಣ್ಣಾ ಹಜಾರೆ ತಮ್ಮ ಬೆಂಬಲವನ್ನು ಹಿಂಪಡೆದು ಉಪವಾಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ಸಂಜೆ ಬಿಜೆಪಿ ನಾಯಕರು ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಬಳಿಕ, ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಹಾಗೂ ಇತರ ಬಿಜೆಪಿ ನಾಯಕರು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಬಿಜೆಪಿ ನಾಯಕರೊಂದಿಗೆ ನಡೆದ ಮಾತುಕತೆ ಬಳಿಕ ಸುದ್ದಿಗೋಷ್ಟಿ ನಡೆಸಿದ ಹಜಾರೆ, “ನಾನು ನೀಡಿದ್ದ 15 ಅಂಶಗಳನ್ನು ಸರ್ಕಾರ ಒಪ್ಪಿಕೊಂಡಿದೆ. ಹೀಗಾಗಿ ಸತ್ಯಾಗ್ರಹವನ್ನು ಹಿಂಪಡೆದುಕೊಳ್ಳುತ್ತಿದ್ದೇನೆ” ಎಂದು ಹೇಳಿದ್ದಾರೆ.

“ನಾನು ಈ ಹಿಂದೆಯೂ ಹಲವು ಬಾರಿ ರೈತರ ಸಮಸ್ಯೆಗಳ ಕುರಿತಾದಂತೆ ಸತ್ಯಾಗ್ರಹಗಳನ್ನು ನಡೆಸಿದ್ದೇನೆ. ಅದು ಯಶಸ್ವಿಯೂ ಆಗಿದೆ. ಆದರೆ ಈಗ ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯುʼಪ್ರಜಾಪ್ರಭುತ್ವ ಮೌಲ್ಯಗಳಿಗೆʼ ಬದ್ಧವಾಗಿಲ್ಲ ಎಂದು ಅಣ್ಣಾ ಹಜಾರೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಹಿಂಸಾಚಾರ ಮಾಡಿದವರು, ವೇಷ ಮರೆಸಿದ್ದ BJPಗರು: ರಾಕೇಶ್ ಟಿಕಾಯತ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights