ಪುದುಚೇರಿಯಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಜೆಡಿ ನಡ್ಡಾ

ಮುಂದಿನ ಮುರು ಅಥವಾ ನಾಲ್ಕು ತಿಂಗಳಲ್ಲಿ ಪುದುಚೇರಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಭ್ರಷ್ಟ ಮುಕ್ತ, ಅಭಿವೃದ್ದಿ ಕೇಂದ್ರಿತ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.

ಕೇಂದ್ರಾಳಿತ ಪ್ರದೇಶವಾದ ಪುದುಚೇರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ಅವರ ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ಹೀಗಾಗಿ ಜನರು ಕಾಂಗ್ರೆಸ್‌ ಸರ್ಕಾರದ ವಿರುದ್ಧವಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸಲಿದ್ದಾರೆ. ಹಾಗಾಗಿ ವಿಧಾನ ಸಭೆಯ 30 ಸ್ಥಾನಗಳ ಪೈಕಿ ಬಿಜೆಪಿ 23 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ 35 ವರ್ಷಗಳಿಂದ ಪುದುಚೇರಿಯಲ್ಲಿ ಕಾಂಗ್ರೆಸ್‌ ಆಡಳಿತ ನಡೆಸಿದೆ. ರಾಜ್ಯದಲ್ಲಿ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನೂ ನಡೆಸಿಲ್ಲ. ರಾಜ್ಯದಲ್ಲಿ 52% ರಷ್ಟು ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ. ಇಲ್ಲಿನ ಕಾಲೇಜುಗಳಲ್ಲೂ ಭ್ರಷ್ಟಚಾರ ಹೆಗ್ಗಿಲ್ಲದೆ ನಡೆಯುತ್ತಿದೆ ಎಂದು ನಡ್ಡಾ ಆರೋಪಿಸಿದ್ದಾರೆ.

35 ವರ್ಷಗಳ ಕಾಲ ನಿರಂತರವಾಗಿ ಅಧಿಕಾರ ನಡೆಸಿರುವ ಕಾಂಗ್ರೆಸ್‌ ಪಕ್ಷವನ್ನು ಜನರು ಈ ಬಾರಿ ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ವಿಶ್ವಾಸದಲ್ಲಿದೆ. ಮುಂದಿನ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಪುದುಚೇರಿಯ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: 2021ರ ಚುನಾವಣೆಗಳಲ್ಲಿ BJP ಹೀನಾಯವಾಗಿ ಸೋಲುತ್ತದೆ: ಕಾರಣವೇನು ಗೊತ್ತೇ?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights