ಸೀತೆಯ ನೇಪಾಳ, ರಾವಣನ ಲಂಕಾಗಿಂತ ರಾಮನ ಭಾರತದಲ್ಲಿ ಪೆಟ್ರೋಲ್‌ ಬೆಲೆ ಹೆಚ್ಚಿದೆ: ಸುಬ್ರಮಣಿಯನ್ ಸ್ವಾಮಿ

ಭಾರತದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ನಿನ್ನೆ (ಸೋಮವಾರ) ಬಜೆಟ್‌ನಲ್ಲಿಯೂ ಪೆಟ್ರೋಲ್‌ಗೆ 2.5 ರೂಪಾಯಿ, ಡೀಸೆಲ್‌ಗೆ 04 ರೂಪಾಯಿ ಏರಿಕೆ ಮಾಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್​ ಸ್ವಾಮಿ ಅವರು, ಸೀತೆಯ ನೇಪಾಳ, ರಾವಣನ ಲಂಕಾಗಿಂತ ರಾಮನ ಭಾರತದಲ್ಲಿ ಪೆಟ್ರೋಲ್‌ ಬೆಲೆ ಹೆಚ್ಚಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ತಮ್ಮದೇ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಟ್ವೀಟ್‌ನಲ್ಲಿ, ರಾಮನ ಭಾರತದಲ್ಲಿ ಪೆಟ್ರೋಲ್‌ 93ರೂ, ಸೀತೆಯ ನೇಪಾಳದಲ್ಲಿ 53 ರೂ ಮತ್ತು ರಾವಣನ ಲಂಕಾದಲ್ಲಿ 51 ರೂ ಇದೆ ಬರೆದಿರುವ ಪೋಸ್ಟರ್‌ ಒಂದನ್ನು ಹಂಚಿಕೊಂಡಿದ್ದು, ತಮ್ಮದೇ ಬಿಜೆಪಿ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಕಳೆದ 03 ತಿಂಗಳಲ್ಲಿ ಪೆಟ್ರೋಲ್‌ ಬೆಲೆ ಸುಮಾರು 35ಕ್ಕೂ ಹೆಚ್ಚು ಬಾರಿ ಏರಿಕೆ ಮಾಡಲಾಗಿದೆ. ಈ ಅವಧಿಯಲ್ಲಿ ಏರಿಕೆಯಾದ ಇಂಧನ ಬೆಲೆಯ ಮೊತ್ತ 15 ರೂಗಳಿಗೂ ಹೆಚ್ಚಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದರೂ, ಭಾರತದಲ್ಲಿ ಇಂಧನ ಬೆಲೆ ಏರುತ್ತಲೇ ಇದೆ. ಇದಕ್ಕೆ ಸರ್ಕಾರಗಳು ವಿಧಿಸುತ್ತಿರುವ ಅಧಿಕ ತೆರಿಗೆ ಕಾರಣ ಎಂದು ಹೇಳಲಾಗಿದ್ದು, ಇಂಧನವನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂಬ ಅಭಿಪ್ರಾಯಗಳೂ ವ್ಯಕ್ತವಾಗುತ್ತಿವೆ.

Read Also: ತೆಲಂಗಾಣ: TRS ಶಾಸಕರ ಮನೆ ಮೇಲೆ ದಾಳಿ; 39 BJP ಕಾರ್ಯಕರ್ತರ ಬಂಧನ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights