ರಾಜ್ಯದಲ್ಲಿ ತಾಲ್ಲೂಕು ಪಂಚಾಯತಿ ರದ್ದು?: ಮುಂದಿನ ಅಧಿವೇಶನದಲ್ಲಿ ನಿರ್ಧರಿಸಲಾಗುವುದು: ಈಶ್ವರಪ್ಪ
ರಾಜ್ಯದಲ್ಲಿ ಜಾರಿಯಲ್ಲಿರುವ ತಾಲ್ಲೂಕು ಪಂಚಾಯತಿ ಆಡಳಿತ ವ್ಯವಸ್ಥೆಯನ್ನು ಅಗತ್ಯವಿಲ್ಲ. ಅದನ್ನು ರದ್ದು ಮಾಡಬೇಕು. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಸದಸ್ಯರಿಗೆ ಸಾಮರ್ಥ್ಯಾಭಿವೃದ್ದಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲ್ಲೂಕು ಪಂಚಾಯತಿ ಆಡಳಿತ ವ್ಯವಸ್ಥೆಯನ್ನು ರದ್ದು ಮಾಡುವ ಬಗ್ಗೆ ಪ್ರಸ್ತಾಪ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕು ಪಂಚಾಯತಿಗಳು ಉಪಯೋಗವಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ಎರಡೇ ಸಾಕು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದರೆ, ತಾಲ್ಲೂಕು ಪಂಚಾಯತಿಯನ್ನು ಏಕಾಏಕಿ ರದ್ದುಮಾಡಲು ಸಾಧ್ಯವಿಲ್ಲ. ಸಂವಿಧಾನಕ್ಕೆ ತಿದ್ದುಪಡಿ ಆಗಬೇಕು ಎಂದು ಅವರು ಹೇಳಿದ್ದಾರೆ.
ತಾಪಂ ರದ್ದತಿ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ನಂತರ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಂಡು, ಸಂವಿಧಾನಕ್ಕೆ ತಿದ್ದುಪಡಿ ತಂದು ತಾಲ್ಲೂಕು ಪಂಚಾಯತಿಗಳನ್ನು ರದ್ದು ಮಾಡಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದೇಣಿಗೆ ದಂಗಲ್..! : ಕುಮಾರಸ್ವಾಮಿ ಹೇಳಿಕೆಗೆ ಸಿಟಿ ರವಿ, ಶ್ರೀರಾಮುಲು, ಮುತಾಲಿಕ್ ತಿರುಗೇಟು!

