ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಅಮಿತ್‌ ಶಾ: ಪಾಲಿಕೆಯಲ್ಲಿ BJPಗೇ ಅಧಿಕಾರ ಎಂದ ಗೃಹ ಸಚಿವ!

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಪ್ರಮುಖ ಆರು ಮಹಾನಗರ ಪಾಲಿಕೆಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಅಹಮದಾಬಾದ್‌ಗೆ ಆಗಮಿಸಿದ್ದು, ಅಹಮದಾಬಾದ್‌ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿ ಮಾಡಿದ್ದಾರೆ.

ಮತದಾನದ ನಂತರ ಮಾತನಾಡಿದ ಅವರು, ಆರು ಮಹಾನಗರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಬಿಜೆಪಿಯೇ ಆಡಳಿತ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಗೆಲುವಿನ ಪಣಯ ಆರಂಭವಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಹಲವಾರು ಚುನಾವಣೆಗಳನ್ನು ಗೆದ್ದಿದ್ದೇವೆ. ಮಹಾನಗರಗಳಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಅವರು ಹೇಳಿದ್ದಾರೆ.

ಅಹಮದಾಬಾದ್‌, ಸೂರತ್‌, ವಡೋದರ, ರಾಜ್‌ಕೋಟ್‌, ಜಾಮ್‌ನಗರ ಮತ್ತು ಭಾವ್‌ನಗರ ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಈ ಆರು ಮಹಾನಗರಗಳಲ್ಲಿ ಬಿಜೆಪಿಯೇ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: ಬಿಜೆಪಿ ಪದಾಧಿಕಾರಿ ಬಾಂಗ್ಲಾದೇಶಿಗ; ನಕಲಿ ದಾಖಲೆಗಳೊಂದಿಗೆ ಭಾರತದಲ್ಲಿ ವಾಸಿಸುತ್ತಿದ್ದಾರೆ: ಅನಿಲ್ ದೇಶ್ಮುಖ್

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights