“ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆಧ್ಯತೆ ನೀಡಿದ್ದೇನೆ”- ಸಿಎಂ!
ಸಿಎಂ ಬಿ.ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಇಂದು 2021-2022ನೇ ಸಾಲಿನ ರಾಜ್ಯ ಬಜೆಟ್’ನ್ನು ಮಂಡನೆ ಮಾಡಲಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ” ಇಂದು ಮಹಿಳಾ ದಿನಾಚರಣೆ ಅಂಗವಾಗಿ ಸಹೋದರಿಯರಿಗೆ, ತಾಯಂದಿರಿಗೆ ಮಹಿಳಾ ದಿನಾಚರಣೆಯ ಶುಭಕೋರಿದರು. ಈ ಬಾರಿ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆಧ್ಯತೆ ನೀಡಿದ್ದೇನೆ” ಎಂದು ಸಿಎಂ ಹೇಳಿದ್ದು ಭಾರೀ ನಿರೀಕ್ಷೆ ಮೂಡಿಸಿದೆ.
ಶೇಷಾದ್ರಿಪುರಂನ ರಾಯರ ಮಠಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ. ನಂತರ ವಿಧಾನ ಸೌಧಕ್ಕೆ ತೆರಳಿದ್ದಾರೆ. ಇಂದು 12.5ಕ್ಕೆ ಶುಭಮುಹೂರ್ತದಲ್ಲಿ ಬಜೆಟ್ ಮಂಡಿಸಲಿದ್ದಾರೆ.
ಕೊರೋನಾ ಸಂಕಷ್ಟ, ಕೇಂದ್ರದಿಂದ ರಾಜ್ಯಕ್ಕೆ ಬಾರದ ಜಿಎಸ್’ಟಿ ಪರಿಹಾರ, ಬಜೆಟ್ ಗಾಂತ್ರಕ್ಕಿಂತಲೂ ಹೆಚ್ಚಾಗಿರುವ ಸಾಲ ಮತ್ತು ಕೊರೋನಾದಿಂದಾಗಿ ಎದುರಾಗಿರುವ ಆರ್ಥಿಕ ಸಂಕಷ್ಟದಂತಹ ಸಾಲು ಸಾಲು ಸವಾಲುಗಳ ನಡುವಲ್ಲೂ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-2022ನೇ ಸಾಲಿನ ರಾಜ್ಯ ಬಜೆಟ್’ನ್ನು ಮಂಡನೆ ಮಾಡಲಿದ್ದು, ಈ ಬಾರಿಯ ರಾಜ್ಯ ಬಜೆಟ್ ಅಭಿವೃದ್ಧಿಯ ದಾಖಲೆಯಾಗಲಿದೆ ಎಂದು ಹೇಳಿದ್ದಾರೆ.

