ಗೀತಾ ಶಿವರಾಜ್‌ಕುಮಾರ್‌ ಕೂಡ ಕಾಂಗ್ರೆಸ್‌ ಸೇರಲಿದ್ದಾರೆ: ಮಧು ಬಂಗಾರಪ್ಪ

ಜೆಡಿಎಸ್‌ ತೊರೆದಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದು, ದೊಡ್ಡ ಸಮಾರಂಭವೊಂದರಲ್ಲಿ ಅಧಿಕೃತವಾಗಿ ಪಕ್ಷದ ಕೈ ಹಿಡಿಯಲಿದ್ದೇನೆ ಎಂದು ಘೋಷಿಸಿದ್ದಾರೆ. ಈ ಬೆನ್ನಲ್ಲೇ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿರುವ ಮಧು ಬಂಗಾರಪ್ಪ, ತಾವು ಮಾತ್ರವಲ್ಲ, ಅವರ ಅಕ್ಕ ಗೀತಾ ಶಿವರಾಜ್‌ಕುಮಾರ್‌ ಕೂಡ ಕಾಂಗ್ರೆಸ್‌ ಪಕ್ಷಕ್ಕೆ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.

ಗೀತಾ ಶಿವರಾಜ್‌ಕುಮಾರ್‌ ಅವರ ಜೊತೆ ಹಲವು ಸುತ್ತಿನ ಮಾತುಕತೆಗಳನ್ನು ನಡೆಸಲಾಗಿದೆ. ಅವರೂ ಕೂಡ ಕಾಂಗ್ರೆಸ್‌ ಸೇರಲು ಒಪ್ಪಿಕೊಂಡಿದ್ದಾರೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇಂದು ದೇಶ ಮತ್ತು ರಾಜ್ಯಕ್ಕೆ ಕಾಂಗ್ರೆಸ್‌ ಅವಶ್ಯಕತೆಯಿದೆ. ಕಾಂಗ್ರೆಸ್‌ನಲ್ಲಿ ಬೆಳೆಯಲು ಅವಕಾಶವೂ ಇದೆ. ಹೀಗಾಗಿ ಕಾಂಗ್ರೆಸ್‌ ಸೇರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾನು ಕುಮಾರಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುವುದಿಲ್ಲ. ಅವರಿಗೆ ನಾನು ಅಣ್ಣನ ಸ್ಥಾನ ಕೊಟ್ಟಿದ್ದೇನೆ. ಅವರು ಏನೇ ಹೇಳಿದರೂ, ನಾನು ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಬೆಳೆಯಲು ಅವಕಾಶವಿದೆ: ಮಧು ಬಂಗಾರಪ್ಪ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights