JNU ದೇಶದ್ರೋಹ ಪ್ರಕರಣ: ಕನ್ಹಯ್ಯ ಕುಮಾರ್ಗೆ ಜಾರ್ಜ್ಶೀಟ್ ಪ್ರತಿ ನೀಡುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚನೆ!
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (JNU) ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ವಿರುದ್ಧದ 2016ರ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ಶೀಟ್ ಪ್ರತಿಯನ್ನು ಕನ್ಹಯ್ಯ ಕುಮಾರ್ ಅವರಿಗೆ ನೀಡುವಂತೆ ದೆಹಲಿ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಸೂಚಿಸಿದೆ.
2016ರಲ್ಲಿ ಜೆಎನ್ಯುನಲ್ಲಿ ನಡೆದ ಪ್ರತಿಭಟನೆ ವೇಳೆ, ಕನ್ಹಯ್ಯ ಕುಮಾರ್ ಸೇರಿದಂತೆ 09 ಜನರ ವಿರುದ್ದ ದೇಶದ್ರೋಹ ಪ್ರಕರಣವನ್ನು ದೆಹಲಿ ಪೊಲೀಸರು ದಾಖಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಜಾರ್ಜ್ಶೀಟ್ನ ಪ್ರತಿಯನ್ನು ಕನ್ಹಯ್ಯ ಕುಮಾರ್ ಅವರಿಗೆ ನೀಡುವಂತೆ ನ್ಯಾಯಾಲಯ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.
ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಸಿಎಮ್ಎಂ) ಪಂಕಜ್ ಶರ್ಮಾ ಅವರು ಪ್ರಕರಣದ ದಾಖಲೆಗಳನ್ನು ಪರಿಶೀಲಿಸಲು ಏಪ್ರಿಲ್ 7 ಕ್ಕೆ ಈ ವಿಷಯವನ್ನು ಮಂಡಿಸಿದ್ದರು. ಈ ಪ್ರಕರಣದಲ್ಲಿ ಈ ಹಿಂದೆ ಬಂಧಿಸದ ಏಳು ಆರೋಪಿಗಳಿಗೆ ಜಾಮೀನು ಸಹ ನೀಡಿದರು. ಏಳು ಮಂದಿ ಆರೋಪಿಗಳು ತಮ್ಮ ಜಾಮೀನು ಅರ್ಜಿಗಳನ್ನು ಸಲ್ಲಿಸಿದರು, ಇದಕ್ಕಾಗಿ ನ್ಯಾಯಾಲಯವು ಅವರಿಗೆ 25 ಸಾವಿರ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಜಾಮೀನು ನೀಡಿತು.
ಕನ್ಹಯ್ಯ ಕುಮಾರ್, ಉಮರ್ ಖಾಲಿದ್ (ದೆಹಲಿ ಗಲಭೆ ಪ್ರಕರಣದಲ್ಲಿ ಈಗಾಗಲೇ ಬಂಧನದಲ್ಲಿದ್ದಾರೆ), ಅನಿರ್ಬನ್ ಮತ್ತು ಇತರ ಏಳು ಮಂದಿ ಚಾರ್ಜ್ಶೀಟ್ನ ಅರಿವನ್ನು ಪಡೆದ ನಂತರ ನ್ಯಾಯಾಲಯ ಹೊರಡಿಸಿದ ಸಮನ್ಸ್ಗೆ ಅನುಗುಣವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಜೆಎನ್ಯು ಮಾಜಿ ವಿದ್ಯಾರ್ಥಿಗಳಾದ ಕನ್ಹಯ್ಯ ಕುಮಾರ್, ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಸೇರಿದಂತೆ ಇತರ ವಿದ್ಯಾರ್ಥಿಗಳು ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ: ಮೋದಿ ಆಡಳಿತ: 519 ಭಾರತೀಯರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು!

