‘ರಾಜ್ಯದಲ್ಲಿ ಸೆಮಿ ಲಾಕ್ಡೌನ್ ಇಲ್ಲ’ ಊಹಾಪೋಹಗಳಿಗೆ ಡಾ.ಕೆ ಸುಧಾಕರ್ ಸ್ಪಷ್ಟನೆ..!

ರಾಜ್ಯದಲ್ಲಿ 2ನೇ ಅಲೆ ಅಬ್ಬರ ಹೆಚ್ಚಾಗುತ್ತಿದ್ದಂತೆ ಮತ್ತೆ ಲಾಕ್ಡೌನ್ ಹಾಗೂ ಸೆಮಿ ಲಾಕ್ಡೌನ್ ಆಗುವ ಸಾಧ್ಯತೆ ಇದೆ ಎನ್ನುವ ಊಹಾಪೋಹಗಳಿಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮದ ಮುಂದೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ” ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ, ಸೆಮಿ ಲಾಕ್ ಡೌನ್ ಇಲ್ಲ, ನೈಟ್ ಕರ್ಫ್ಯೂ ಇದೆ ಎನ್ನುವುದು ಸುಳ್ಳು ಸುದ್ದಿ. ಸರ್ಕಾರದಲ್ಲಿ ಕಟ್ಟುನಿಟ್ಟಿನ ನಿಯಮಗಳ ಬಗ್ಗೆ ಸರ್ಕಾರಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಊಹಾಪೋಹದ ಸುದ್ದಿಯನ್ನು ರಾಜ್ಯದ ಜನ ನಂಬಬಾರದು. ಲಾಕ್ ಡೌನ್ ಹಾಗೂ ಸೆಮಿ ಲಾಕ್ ಡೌನ್ ಇವತ್ತಿನ ಪರಿಸ್ಥಿತಿಗೆ ಅನ್ವಯ ಆಗೋದಿಲ್ಲ” ಎಂದಿದ್ದಾರೆ.

ಜೊತೆಗೆ ‘ಕಳೆದ ವರ್ಷ ನಮಗೆ ಅನುಭವ ಆಗಿದೆ. ಈ ಬಾರಿ ತಪ್ಪಿಗೆ ಅವಕಾಶ ಇಲ್ಲ. ಈಗಾಗಲೇ ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.  ಕಳೆದ ನಾಲ್ಕೈದು ತಿಂಗಳಿಂದ ಇರದ ಕೊರೊನಾ ಒಂದೇ ತಿಂಗಳಿಂದ ಏಕಾಏಕಿ ಹೆಚ್ಚಾಗಿದೆ. ಇದನ್ನು ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಕಾರ್ಯ ನಡೆಸುತ್ತಿದೆ. ಕೊರೊನಾ ನಿಯಂತ್ರಣ ಕೇವಲ ಸರ್ಕಾರದಿಂದ ಸಾಧ್ಯವಿಲ್ಲ. ಸಾರ್ವಜನಿಕರೂ ಎಚ್ಚರಿಕೆ ವಹಿಸಬೇಕು’ ಎಂದಿದ್ದಾರೆ.

ಅನುಮತಿ ಇಲ್ಲದೇ ಮದುವೆಯಂತಹ ಸಮಾರಂಭಗಳು ನಡೆಸುವಂತಿಲ್ಲ. ಸಭೆ, ಮದುವೆ ಸಮಾರಂಭಗಳಿಗೆ ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕು. ನಿರ್ಧಿಷ್ಟ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು ಎಂದಿದ್ದಾರೆ.

ಒಟ್ಟಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಸೋಂಕಿತರ ಸಂಖ್ಯೆ ಹೀಗೆ ಹೆಚ್ಚಾಗುತ್ತಲೇ ಹೋದರೆ ಮುಂದೆ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತದೆ ಎಂದು ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights