ರಾಕೇಶ್ ಟಿಕಾಯತ್ ವಿರುದ್ಧ ಪ್ರಚೋದನಕಾರಿ ಭಾಷಣದ ಪ್ರಕರಣ ದಾಖಲಿಸಿರುವುದು ಖಂಡನೀಯ – ಡಿಕೆಶಿ

ಶಿವಮೊಗ್ಗದಲ್ಲಿ ರಾಕೇಶ್ ಟಿಕಾಯತ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.

ಮಾರ್ಚ್ 20ರಂದು ಶನಿವಾರ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಭಾಷಣ ಮಾಡಿದ ದೆಹಲಿಯಲ್ಲಿ ರೈತ ಆಂದೋಲನದ ನೇತೃತ್ವ ವಹಿಸಿಕೊಂಡ ರಾಕೇಶ್ ಟಿಕಾಯತ್ ವಿರುದ್ಧ ಸದ್ಯ ಸುಮೋಟೋ ಪ್ರಕರಣ ದಾಖಲಾಗಿದೆ. ಇದನ್ನು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಖಂಡಿಸಿದ್ದಾರೆ. ಮಾತ್ರವಲ್ಲದೇ ಟಿಕಾಯತ್ ವಿರುದ್ಧ ದಾಖಲು ಮಾಡಿರುವ ಪ್ರಕರಣ ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ.

“ರೈತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿ, ಎಂದು ಕರೆ ನೀಡಿದ ರಾಕೇಶ್ ಟಿಕಾಯತ್ ವಿರುದ್ಧ ಪ್ರಚೋದನಕಾರಿ ಭಾಷಣದ ಪ್ರಕರಣ ದಾಖಲಿಸಿರುವುದು ಖಂಡನೀಯ. ಇದು ರೈತರ ಧ್ವನಿ ಹತ್ತಿಕ್ಕು ಮತ್ತು ಪ್ರತಿಭಟನೆ ನಡೆಸುವ ಸಂವಿಧಾನ ಬದ್ಧ ಹಕ್ಕನ್ನು ದಮನಿಸುವ ಸರ್ವಾಧಿಕಾರಿ ನಡೆ. ಸರ್ಕಾರ ಕೂಡಲೇ ಟಿಕಾಯತ್ ಅವರ ಮೇಲಿನ ಪ್ರಕರಣವನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆ ಪ್ರಚೋದನಕಾರಿಯಾಗಿದೆ ಎಂದು ದೂರಲಾಗಿದೆ. ಇದರಲ್ಲಿ ಯಾವ ಪ್ರಚೋದನಕಾರಿ ಹೇಳಿಕೆಯೂ ಇಲ್ಲ. ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧವಾಗಿದೆ. ಟಿಕಾಯತ್ ವಿರುದ್ಧ ಕೇಸ್ ರದ್ದಾಗಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights